ಪಿಯೂಷ್‌ ಗೋಯಲ್‌, ಮಲ್ಲಿಕಾರ್ಜುನ್ ಖರ್ಗೆ 
ದೇಶ

ತಾಕತ್ತಿದ್ದರೆ ಮುಂಬೈನಲ್ಲಿ ನನ್ನ ವಿರುದ್ಧ ಸ್ಪರ್ಧಿಸಿ: ಖರ್ಗೆಗೆ ಗೋಯಲ್‌ ಸವಾಲು

ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಹಾಗೂ ಕೇಂದ್ರ ಹಣಕಾಸು ಸಚಿವ ಪಿಯೂಷ್‌ ಗೋಯಲ್‌ ನಡುವೆ ...

ನವದೆಹಲಿ: ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಹಾಗೂ ಕೇಂದ್ರ ಹಣಕಾಸು ಸಚಿವ ಪಿಯೂಷ್‌ ಗೋಯಲ್‌ ನಡುವೆ ಲೋಕಸಭೆಯಲ್ಲಿ ಗುರುವಾರ ತೀವ್ರ ಮಾತಿನ ಚಕಮಕಿ ನಡೆದಿದ್ದು, ತಾಕತ್ತಿದ್ದರೆ ಮುಂಬೈನಲ್ಲಿ ನನ್ನ ವಿರುದ್ಧ ಸ್ಪರ್ಧಿಸಿ ಎಂದು ಗೋಯಲ್ ಅವರು ಖರ್ಗೆ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ.
ಇಂದು ಲೋಕಸಭೆಯಲ್ಲಿ ಜಿಎಸ್ ಟಿ ಕಾನೂನು ತಿದ್ದುಪಡಿ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಗೋಯಲ್, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸಂಸದರ ಸಂಖ್ಯೆ ನಾಲ್ಕಕ್ಕೆ ಇಳಿಯಲಿದೆ ಎಂದರು.
ಇದರಿಂದ ಆಕ್ರೋಶಗೊಂಡ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ, 'ಈ ವರೆಗೆ ಯಾವುದೇ ಸ್ಥಳೀಯ ಚುನಾವಣೆಯನ್ನೂ ಗೆಲ್ಲದಿರುವ ಗೋಯಲ್‌ ಅವರನ್ನು ರಾಜ್ಯಸಭೆಗೆ ತಂದು ಹಣಕಾಸು ಸಚಿವರನ್ನಾಗಿ ಮಾಡಲಾಗಿದೆ' ಎಂದು ಲೇವಡಿ ಮಾಡಿದರು. 
ತಾಕತ್ತಿದ್ದರೆ ಮುಂಬೈನಲ್ಲಿ ನನ್ನ ವಿರುದ್ಧ ಸ್ಪರ್ಧಿಸಿ ಎಂದು ಗೋಯಲ್‌ ಅವರು ಖರ್ಗೆಗೆ ಸವಾಲಿನ ತಿರುಗೇಟು ನೀಡಿದರು.
ಇದೇ ವೇಳೆ ರಾಫೆಲ್ ಒಪ್ಪಂದದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ ಮಲ್ಲಿಕಾರ್ಜುನ್ ಖರ್ಗೆ ಹಾಗೂ ಇತರೆ ಕಾಂಗ್ರೆಸ್ ನಾಯಕರು, ರಾಫೆಲ್ ಡೀಲ್ ಅನ್ನು ಜಂಟಿ ಸದನ ಸಮಿತಿ(ಜೆಪಿಸಿ) ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!