ಸೋನಿಯಾ ಗಾಂಧಿ 
ದೇಶ

ಕೆಲವೊಮ್ಮೆ ಸೋಲುತ್ತೇವೆ, ಕೆಲವೊಮ್ಮೆ ಗೆಲ್ಲುತ್ತೇವೆ: ರಾಜ್ಯಸಭೆ ಚುನಾವಣೆ ಬಗ್ಗೆ ಸೋನಿಯಾ ಪ್ರತಿಕ್ರಿಯೆ

ರಾಜ್ಯಸಭೆ ಉಪಾಧ್ಯಕ್ಷರ ಚುನಾವಣೆಯಲ್ಲಿ ಪಕ್ಷದ ಸೋಲಿನ ಬಗ್ಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪ್ರತಿಕ್ರಿಯಿಸಿದ್ದಾರೆ. ಕೆಲವೊಮ್ಮೆ ನಾವು ಗೆಲ್ಲುತ್ತೇವೆ, ...

ನವದೆಹಲಿ: ರಾಜ್ಯಸಭೆ ಉಪಾಧ್ಯಕ್ಷರ ಚುನಾವಣೆಯಲ್ಲಿ ಪಕ್ಷದ ಸೋಲಿನ ಬಗ್ಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪ್ರತಿಕ್ರಿಯಿಸಿದ್ದಾರೆ. ಕೆಲವೊಮ್ಮೆ ನಾವು ಗೆಲ್ಲುತ್ತೇವೆ, ಕೆಲವೊಮ್ಮೆ ಸೋಲುತ್ತೇವೆ ಎಂದು ಹೇಳಿದ್ದಾರೆ.
ರಾಜ್ಯಸಭೆ ಉಪಸಭಾಪತಿಯಾಗಿ ಎನ್'ಡಿಎ ಅಭ್ಯರ್ಥಿ ಹರಿವಂಶ್ ಸಿಂಗ್ ಅವರು ಭರ್ಜರಿ ಗೆಲವು ಸಾಧಿಸಿರುವ ಹಿನ್ನಲೆಯಲ್ಲಿ ಸೋನಿಯಾ ಈ ರೀತಿ ಪ್ರತಿಕ್ರಿಯಿಸಿದ್ದಾರೆ.
ಪಿ.ಜೆ ಕುರಿಯನ್ ಅವರ ನಿವೃತ್ತಿ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆ ನಡೆದ ಮತದಾನದಲ್ಲಿ ಹರಿವಂಶ್ ನಾರಾಯಣ್ ಸಿಂಗ್ ಅವರು ಗೆಲವು ಸಾಧಿಸಿದ್ದಾರೆ. 
ಒಟ್ಟು ಮತಗಳ ಪೈಕಿ ಹರಿವಂಶ ಅವರು 125 ಮತಗಳನ್ನು ಪಡೆಗು ಗೆಲವು ಸಾಧಿಸಿದ್ದರೆ, ಹರಿಪ್ರಸಾದ್ ಅವರು 105 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. 
ರಾಜ್ಯಸಭೆ ಸಭಾಪತಿಯಾಗಿರುವ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿದರು. ಬಳಿಕ ಮತಕ್ಕೆ ಹಾಕಿದರು. ಸದಸ್ಯರು ತಾವು ಕುಳಿತ ಆಸನದ ಮುಂದಿದ್ದ ಗುಂಡಿಗಳನ್ನು ಒತ್ತುವ ಮೂಲಕ ಮತ ಚಲಾಯಿಸಿದರು. ಇದರಂತೆ ಒಟ್ಟು 202 ಮತಗಳು ಚಲಾವಣೆಯಾದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನ್ಯೂನತೆಗಳನ್ನು ಸರಿಪಡಿಸಲು ಕಸ್ತೂರಿರಂಗನ್ ವರದಿಯ ವ್ಯಾಪ್ತಿಗೆ ಬರುವ ಪ್ರದೇಶಗಳಲ್ಲಿ ಭೌತಿಕ ಪರಿಶೀಲನೆ: ಸಿಎಂ ಶಿವಕುಮಾರ್

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ: 'ಉದರನಿಮಿತ್ತಂ ಬಹುಕೃತ ವೇಷಂ' ಕರ್ನಾಟಕ ನನ್ನ ಕರ್ಮ ಭೂಮಿ- ಅನಂತ್ ನಾಗ್ ಭಾವುಕ ಮಾತು!

ರಾಜ್ಯದಲ್ಲಿ ಬರಪೀಡಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ!

ಅಕ್ರಮ ಆಸ್ತಿ ಗಳಿಕೆ: ರಾಜ್ಯಾದ್ಯಂತ ಎಂಟು ಸರ್ಕಾರಿ ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಒಟ್ಟು 29.61 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ!

ಪಶ್ಚಿಮ ಬಂಗಾಳ ಪ್ರವೇಶಿಸಲು ಇಬ್ಬರು ಬಾಂಗ್ಲಾದೇಶಿ ಪ್ರಜೆಗಳಿಗೆ ಸಹಾಯ: ಭಾರತೀಯ ಯೋಧನ ಬಂಧನ