ಸಾಂದರ್ಭಿಕ ಚಿತ್ರ 
ದೇಶ

ದೆಹಲಿ ಸರ್ಕಾರಿ ಶಾಲೆಯಲ್ಲಿ 2ನೇ ತರಗತಿ ಬಾಲಕಿ ಮೇಲೆ ಎಲೆಕ್ಟ್ರೀಶಿಯನ್ ನಿಂದ ಅತ್ಯಾಚಾರ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ವರದಿಯಾಗಿದ್ದು, ಸರ್ಕಾರಿ ಶಾಲೆಯ ಸಿಬ್ಬಂದಿಯೇ 2ನೇ ತರಗಿತಿ ವಿದ್ಯಾರ್ಥಿ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ತಿಳಿದುಬಂದಿದೆ.

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ವರದಿಯಾಗಿದ್ದು, ಸರ್ಕಾರಿ ಶಾಲೆಯ ಸಿಬ್ಬಂದಿಯೇ 2ನೇ ತರಗಿತಿ ವಿದ್ಯಾರ್ಥಿ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ತಿಳಿದುಬಂದಿದೆ.
ದೆಹಲಿಯ ಗಾಲ್ ಮಾರ್ಕೆಟ್ ಪ್ರದೇಶದ ಎನ್ ಡಿಎಂಸಿ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಶಾಲೆಯಲ್ಲಿ ಎಲೆಕ್ಟ್ರೀಶಿಯನ್ ಆಗಿರುವ ರಾಮ್ ಅಸ್ರೆ(37 ವರ್ಷ) ಎಂಬಾತ ಶಾಲಾ ಬಾಲಕಿಯ ಮೇಲೆ ಅತ್ಯಾಚಾರ ವೆಸಗಿದ್ದಾನೆ ಎನ್ನಲಾಗಿದೆ. ಮೂಲಗಳ ಪ್ರಕಾರ ರಾಮ್ ಅಸ್ರೆ ಬಾಲಕಿಯನ್ನು ಪುಸಲಾಯಿಸಿ ಶಾಲೆಯ ನಿರ್ಜನ ಕೊಠಡಿಗೆ ಕರೆದೊಯ್ದು ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ.
ಬಳಿಕ ಶಾಲೆಯಿಂದ ಮನೆಗೆ ಹಿಂತಿರುಗಿದ ಬಳಿಕ ಬಾಲಕಿ ತನ್ನ ಪೋಷಕರಿಗೆ ವಿವರಿಸಿದಾಗ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ದೆಹಲಿಯ ಎನ್‍ಡಿಎಂಸಿ ಶಾಲೆಯಲ್ಲಿ ಎಲೆಕ್ಟ್ರೀಶಿಯನ್ ಆಗಿ ರಾಮ್ ಅಸ್ರೆ ಖಾಯಂ ನೌಕರನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಪ್ರಸ್ತುತ ಆರೋಪಿ ರಾಮ್ ಅಸ್ರೆಯನ್ನು ಬಂಧಿಸಿದ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೊನ್ನೆಯಷ್ಟೇ ದೇಶದಲ್ಲಿ ಪ್ರತಿ ಆರು ಗಂಟೆಗೊಮ್ಮೆ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ನಡೆಯುತ್ತಿದೆ ಎಂದು ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹನಿಟ್ರ್ಯಾಪ್ ಭೀತಿಯಲ್ಲಿದ್ದ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮಾಧ್ಯಮಗಳಿಗೆ ವಿಡಿಯೋ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿದ ಕೋರ್ಟ್

ಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!

'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂಗೆ ಅರ್ಜಿ, 4 ಪ್ರಮುಖ ಪಕ್ಷಗಳು "ದೂರ ದೂರ"

'ನೀನು ಭಯೋತ್ಪಾದಕ ಇಲ್ಲಿಂದ ಹೋಗು': ಅಮೆರಿಕದಲ್ಲಿ Nobel ಯೂನಸ್ ವಿರುದ್ಧ ಬಾಂಗ್ಲಾ ವಲಸಿಗರಿಂದ ಘೋಷಣೆ, Video

ಮುಖ್ಯ ಚುನಾವಣಾ ಆಯುಕ್ತರಿಗೆ ಪದ್ಮ ಪ್ರಶಸ್ತಿಗಳೇ ಲಂಚ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಫೋಟಕ ಹೇಳಿಕೆ