ದೇಶ

ರಾಜೀವ್ ಗಾಂಧಿ ಹತ್ಯೆ ಅಪರಾಧಿಗಳನ್ನು ಬಿಡುಗಡೆ ಮಾಡಲು ಸಾಧ್ಯವಿಲ್ಲ: ಸುಪ್ರೀಂಗೆ ಕೇಂದ್ರ ಸರ್ಕಾರ

Shilpa D
ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆ ಪ್ರಕರಣದ 7 ಅಪರಾಧಿಗಳನ್ನು ಜೈಲಿನಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ.
ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ 7 ಅಪರಾಧಿಗಳ ಬಿಡುಗಡೆಗೆ ವಿರೋಧ ವ್ಯಕ್ತ ಪಡಿಸಿತ್ತು ಎಂದು ಸುಪ್ರೀಂಕೋರ್ಟ್ ತಿಳಿಸಿದೆ,  ತಮಿಳುನಾಡು ಜೈಲಿನಲ್ಲಿ 7 ಅಪರಾಧಿಗಳು 27 ವರ್ಷದಿಂದ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ. ಇವರನ್ನು ಬಿಡುಗಡೆ ಮಾಡಬೇಕೆಂದು ತಮಿಳುನಾಡು ಸರ್ಕಾರ ಮನವಿ ಮಾಡಿತ್ತು.
ಅಪರಾಧಿಗಳನ್ನು ಬಿಡುಗಡೆ ಮಾಡುವ ಸಂಬಂಧ ನಿರ್ಧಾರ ಕೈಗೊಳ್ಳುವಂತೆ ಕೇಳುವಂತೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿತ್ತು,  ಆದರೆ ರಾಜೀವ್ ಹಂತಕರನ್ನು ಯಾವುದೇ ಕಾರಣಕ್ಕೂ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ತಿಳಿಸಿದೆ. ಕೇಂದ್ರ ಸರ್ಕಾರದ ಅನುಮತಿಯಿಲ್ಲದೇ ಅಪರಾಧಿಗಳನ್ನು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೋರ್ಟ್ ತಿಳಿಸಿದೆ.
SCROLL FOR NEXT