ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಹೈಕೋರ್ಟ್ ನ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ಗೀತಾ ಮಿತ್ತಲ್ ಅವರು ಶನಿವಾರ ಪ್ರಮಾಣವಚನ ಸ್ವೀಕರಿಸಿದರು.
ಇಂದು ರಾಜಭವನದಲ್ಲಿ ರಾಜ್ಯಪಾಲ ಎನ್ ಎನ್ ವೊಹ್ರಾ ಅವರು ಗೀತಾ ಮಿತ್ತಲ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ದೆಹಲಿ ಹೈಕೋರ್ಟ್ ನಲ್ಲಿ ತಾತ್ಕಾಲಿಕ ಮುಖ್ಯ ನ್ಯಾಯಮೂರ್ತಿಯಾಗಿ ಕೆಲಸ ಮಾಡುತ್ತಿದ್ದ
ಗೀತಾ ಮಿತ್ತಲ್ ಅವರನ್ನು ಕಣಿವೆ ರಾಜ್ಯದ ಮುಖ್ಯ ನ್ಯಾಯಮೂರ್ತಿಯಾಗಿ ಆಗಸ್ಟ್ 4ರಂದು ನೇಮಕ ಮಾಡಲಾಗಿತ್ತು.
ಜುಲೈ 16 ರಂದು ಸುಪ್ರೀಂಕೋರ್ಟ್ ಕೊಲಿಜಿಯಂ ಜಮ್ಮು ಕಾಶ್ಮೀರ ಹೈಕೋರ್ಟ್ ಗೆ ಗೀತ್ ಮಿತ್ತಲ್ ಅವರ ಹೆಸರನ್ನು ಶಿಫಾರಸು ಮಾಡಿತ್ತು.