ಸಂಗ್ರಹ ಚಿತ್ರ 
ದೇಶ

ಕಮ್ಯುನಿಸ್ಟ್​ ನಾಯಕ, ಮಾಜಿ ಲೋಕಸಭಾ ಸ್ಪೀಕರ್ ಸೋಮನಾಥ ಚಟರ್ಜಿ ಆರೋಗ್ಯ ಗಂಭೀರ

ಲೋಕಸಭೆಯ ಮಾಜಿ ಸ್ಪೀಕರ್​ ಹಾಗೂ ಹಿರಿಯ ಕಮ್ಯೂನಿಸ್ಟ್ ಮುಖಂಡ ಸೋಮನಾಥ ಚಟರ್ಜಿ ಅವರ ಆರೋಗ್ಯದಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ ಎಂದು ತಿಳಿದುಬಂದಿದೆ.

ಕೊಲ್ಕತ್ತಾ: ಲೋಕಸಭೆಯ ಮಾಜಿ ಸ್ಪೀಕರ್​ ಹಾಗೂ ಹಿರಿಯ ಕಮ್ಯೂನಿಸ್ಟ್ ಮುಖಂಡ ಸೋಮನಾಥ ಚಟರ್ಜಿ ಅವರ ಆರೋಗ್ಯದಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ ಎಂದು ತಿಳಿದುಬಂದಿದೆ.
89 ವರ್ಷಗಳ ಸೋಮನಾಥ್ ಚಟರ್ಜಿ ಅವರನ್ನು ಕೋಲ್ಕತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಾಲುಗುತ್ತಿದೆ. ಅಲ್ಲದೆ ಕೃತಕ ಉಸಿರಾಟದ ವ್ಯವಸ್ಥೆಯನ್ನೂ ಅಳವಡಿಸಲಾಗಿದೆ ಎಂದು ತಿಳಿದುಬಂದಿದೆ.
ವಯೋಸಹಜ ಅನಾರೋಗ್ಯ ಸಮಸ್ಯೆಗಳಿಂದ ಚಟರ್ಜಿ ಅವರು ಬಳಲುತ್ತಿದ್ದು, ಇದಲ್ಲದೆ ಕಿಡ್ನಿ ಸೋಂಕಿನಿಂದಾಗಿಯೂ ಚಟರ್ಜಿ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. 
ಹತ್ತು ಬಾರಿ ಲೋಕಸಭೆಗೆ ಆಯ್ಕೆಯಾಗಿರುವ ಸೋಮನಾಥ ಚಟರ್ಜಿ 13ನೇ ಲೋಕಸಭೆಯ ಸ್ಪೀಕರ್​ ಆಗಿ ಕಾರ್ಯನಿರ್ವಹಿಸಿದ್ದರು. ಕಳೆದ ಜುಲೈನಲ್ಲಿ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚೇತರಿಸಿಕೊಂಡಿದ್ದರು. ಆದರೆ, ಒಂದೇ ತಿಂಗಳ ಅಂತರದಲ್ಲಿ ಮತ್ತೆ ಅನಾರೋಗ್ಯಕ್ಕೀಡಾಗಿದ್ದಾರೆ. ಎಡರಂಗದ ಅಗ್ರಮಾನ್ಯ ನಾಯಕರೆನಿಸಿಕೊಂಡಿದ್ದ ಸೋಮನಾಥ ಚಟರ್ಜಿ ಅವರನ್ನು 2008ರಲ್ಲಿ ಸಿಪಿಎಂನಿಂದ ಉಚ್ಚಾಟಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT