ಲೋಕಸಭೆ ಮಾಜಿ ಸ್ಪೀಕರ್ ಸೋಮನಾಥ ಚಟರ್ಜಿ 
ದೇಶ

ವೈದ್ಯಕೀಯ ಸಂಶೋಧನೆಗೆ ಸೋಮನಾಥ ಚಟರ್ಜಿಯವರ ದೇಹದಾನ

ವೈದ್ಯಕೀಯ ಸಂಶೋಧನೆಗೆ ಲೋಕಸಭೆ ಮಾಜಿ ಸ್ಪೀಕರ್ ಸೋಮನಾಥ ಚಟರ್ಜಿಯವರ ದೇಹವನ್ನು ದಾನ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ...

ನವದೆಹಲಿ: ವೈದ್ಯಕೀಯ ಸಂಶೋಧನೆಗೆ ಲೋಕಸಭೆ ಮಾಜಿ ಸ್ಪೀಕರ್ ಸೋಮನಾಥ ಚಟರ್ಜಿಯವರ ದೇಹವನ್ನು ದಾನ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಈ ಕುರಿತಂತೆ ಹೇಳಿಕೆ ನೀಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು, ಸೋಮನಾಥ್ ಚಟರ್ಜಿಯವರು ಹೈಕೋರ್ಟ್ ನಲ್ಲಿ ಸುದೀರ್ಘ ಕಾಲ ಕಳೆದಿದ್ದರು. ಚಟರ್ಜಿಯವರ ಪಾರ್ಥೀವ ಶರೀರವನ್ನು ಬೆಲ್ಲೆ ವ್ಯೂ ಕ್ಲಿನಿಕ್ ನಿಂದ ಹೈಕೋರ್ಟ್'ಗೆ ತೆಗೆದುಕೊಂಡು ಹೋಗಲಾಗುತ್ತದೆ. ನ್ಯಾಯಾಲಯದಿಂದ ರಾಜ್ಯ ವಿಧಾನಸಭೆಗೆ ಕರೆದೊಯ್ದು ಅಲ್ಲಿ ರಾಜ್ಯ ಸರ್ಕಾರದ ವತಿಯಿಂದ ಸಕಲ ಗೌರವಗಳನ್ನು ಸಲ್ಲಿಸಲಾಗುತ್ತದೆ. 
ವಿಧಾನಸಭೆಯಲ್ಲಿ ಕೆಲ ಗಂಟೆಗಳ ಕಾಲ ಇರಿಸಿ, ನಂತರ ಚಟರ್ಜಿಯವರ ಕುಟುಂಬ ಸದಸ್ಯರಿಗೆ ಹಸ್ತಾಂತರ ಮಾಡಲಾಗುತ್ತದೆ. ಬಳಿಕ ವೈದ್ಯಕೀಯ ಸಂಶೋಧನೆಗಾಗಿ ಎಸ್ಎಸ್ಎಮ್ ಆಸ್ಪತ್ರೆಗೆ ದೇಹವನ್ನು ದಾನ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. 
ಲೋಕಸಭೆಯ ಮಾಜಿ ಸ್ಪೀಕರ್​ ಹಾಗೂ ಹಿರಿಯ ಕಮ್ಯೂನಿಸ್ಟ್ ಮುಖಂಡ ಸೋಮನಾಥ ಚಟರ್ಜಿಯವರು ತೀವ್ರ ಅನಾರೋಗ್ಯದಿಂದಾಗಿ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. 
ಹತ್ತು ಬಾರಿ ಲೋಕಸಭೆಗೆ ಆಯ್ಕೆಯಾಗಿರುವ ಸೋಮನಾಥ ಚಟರ್ಜಿ 13ನೇ ಲೋಕಸಭೆಯ ಸ್ಪೀಕರ್​ ಆಗಿ ಕಾರ್ಯನಿರ್ವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!