ತಿರುವನಂತಪುರಂ: ಕೇರಳದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಉಂಟಾಗಿರುವ ಭೂಕುಸಿ, ಪ್ರವಾಹ ಸೇರಿ ಮಳೆ ಸಂಬಂಧಿತ ಅನಾಹುತಗಳಲ್ಲಿ ಇದುವರೆಗೂ 39 ಮಂದಿ ಸಾವನ್ನಪ್ಪಿದ್ದಾರೆ,
ನಿನ್ನೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಾಥಮಿಕ ವರದಿ ಬಿಡುಗಡೆ ಮಾಡಿದ್ದ, ಪ್ರವಾಹದಿಂದಾಗಿ 8,316 ಕೋಟಿ ನಷ್ಟವಾಗಿದೆ ಎಂದು ವರದಿ ನೀಡಿದ್ದಾರೆ.
ತಕ್ಷಣ ಪರಿಹಾರ ಕಾರ್ಯ ಕೈಗೊಳ್ಳಲು ಹೆಚ್ಚುವರಿಯಾಗಿ 400 ಕೋಟಿ ರು ಬಿಡುಪಗಡೆ ಮಾಡುವುಂತೆ ಕೇಂದ್ರ ಗೃಹ ಸಚಿವಾಲಯಕ್ಕ ಮನವಿ ಮಾಡಿದ್ದಾರೆ.
ಅಪರೂಪದ ವಿಪತ್ತು ಎಂದು ಘೋಷಿಸಬೇಕು ಕೇರಳ ಸರ್ಕಾರ ಮನವಿ ಮಾಡಿದೆ, ಕೇರಳದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜಲಪ್ರವಾಹ ಸ್ಥಿತಿ ಉಂಟಾಗಿದ್ದು, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ವೈಮಾನಿಕ ಸಮೀಕ್ಷೆ ನಡೆಸಿ ಹೆಚ್ಚುವರಿಯಾಗಿ 100 ಕೋಟಿ ರು ಹಣ ಘೋಷಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics