ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜವಡೇಕರ್
ಭುವನೇಶ್ವರ್: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಥಳೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜವಡೇಕರ್ ಅವರು ಸೋಮವಾರ ಸ್ಪಷ್ಟಪಡಿಸಿದ್ದಾರೆ.
ರಾಜ್ಯಸಭೆ ಉಪಸಭಾಪತಿ ಚುನಾವಣೆ ವೇಳೆ ಬಿಜೆಡಿ ಎನ್'ಡಿಎ ಅಭ್ಯರ್ಥಿಗೆ ಬೆಂಬಲ ನೀಡಿತ್ತು. ಈ ಹಿನ್ನಲೆಯಲ್ಲಿ ಲೋಕಸಭಾ ಚುನಾವಣೆ ವೇಳೆ ಬಿಜೆಪಿ, ಬಿಜೆಡಿ ಜೊತೆಗೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಹೇಳಲಾಗುತ್ತಿತ್ತು.
ಈ ಹಿನ್ನಲೆಯಲ್ಲಿ ಸ್ಪಷ್ಟನೆ ನೀಡಿರುವ ಜವಡೇಕರ್ ಅವರು, ರಾಜ್ಯಸಭಾ ಉಪಸಭಾಪತಿ ಚುನಾವಣೆ ವೇಳೆ ಬಿಜೆಡಿ ಸೇರಿ ಹಲವು ರಾಜಕೀಯ ಪಕ್ಷಗಳು ಬಿಜೆಪಿಗೆ ಬೆಂಬಲ ನೀಡಿತ್ತು. ಆದರೆ, ಬಿಜೆಪಿಯು ಬಿಜೆಡಿ ಜೊತೆಗೆ ಮೈತ್ರಿ ಮಾಡಿಕೊಳ್ಳುತ್ತಿಲ್ಲ. ಕೇವಲ ಬಿಜೆಡಿ ಅಷ್ಟೇ ಅಲ್ಲ, ಯಾವುದೇ ಸ್ಥಳೀಯ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.
125 ಮತಗಳನ್ನು ಪಡೆಯುವ ಮೂಲಕ ಆಡಳಿತಾರೂಢ ಎನ್'ಡಿಎ ಪಕ್ಷದ ಅಭ್ಯರ್ಥಿ ಜೆಡಿ(ಯು) ಸದಸ್ಯ ಹರಿವಂಶ ನಾರಾಯಣ್ ಸಿಂಗ್ ಅವರು ಗೆಲವು ಸಾಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics