ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಪಿಎನ್ ಬಿ ಹಗರಣ: ಮಾಜಿ ಎಂಡಿ ಉಷಾ ಅನಂತಸುಬ್ರಹ್ಮಣ್ಯನ್ ಸೇವೆಯಿಂದ ವಜಾ

ಬಹುಕೋಟಿ ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಪಿಎನ್ ಬಿ ಮಾಜಿ ...

ಉಷಾ ಅನಂತಸುಬ್ರಹ್ಮಣ್ಯನ್
Lingaraj Badiger
Updated On : 13 Aug 2018, 6:43 am
ನವದೆಹಲಿ: ಬಹುಕೋಟಿ ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಪಿಎನ್ ಬಿ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಉಷಾ ಅನಂತಸುಬ್ರಹ್ಮಣ್ಯನ್ ಅವರನ್ನು ಸೇವೆಯಿಂದ ಸೋಮವಾರ ವಜಾಗೊಳಿಸದೆ.
14 ಸಾವಿರ ಕೋಟಿ ರುಪಾಯಿ ಪಿಎನ್ ಬಿ ಹಗರಣಕ್ಕೆ ಸಂಬಂಧಿಸಿದಂತೆ ಮೂರು ತಿಂಗಳ ಹಿಂದಷ್ಟೇ ಉಷಾ ಅವರನ್ನು ಅಲಹಬಾದ್ ಬ್ಯಾಂಕ್ ಮತ್ತು ಪಿಎನ್ ಬಿಯ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯಿಂದ ವಜಾಗೊಳಿಸಲಾಗಿತ್ತು. ಆದರೆ ಬ್ಯಾಂಕ್ ಉದ್ಯೋಗಿಯಾಗಿ ಮುಂದುವರೆದಿದ್ದರು. 
ಉಷಾ ಅನಂತಸುಬ್ರಹ್ಮಣ್ಯನ್ ಇಂದು ಸೇವೆಯಿಂದಲೇ ವಜಾಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Advertisement

Advertisement

ಪಿಎನ್ ಬಿ ಹಗರಣಕ್ಕೆ ಸಂಬಂಧಿಸಿದತೆ ಕಳೆದ ಮೇ ತಿಂಗಳಲ್ಲಿ ಸಿಬಿಐ ಸಲ್ಲಿಸಿದ್ದ ಚಾರ್ಜ್​ಶೀಟ್​ನಲ್ಲಿ, ವಜ್ರ ವ್ಯಾಪಾರಿ ನೀರವ್ ಮೋದಿ, ಮೆಹುಲ್​ ಚೋಕ್ಸಿ ಹಾಗೂ ಉಷಾ ಸುಬ್ರಹ್ಮಣ್ಯನ್ ಸೇರಿದಂತೆ ಮೂವರು ಅಧಿಕಾರಿಗಳ ಹೆಸರಿದೆ.
ವಂಚನೆ ನಡೆದ ಸಮಯದಲ್ಲಿ ಪಿಎನ್ ಬಿ ಬ್ಯಾಂಕ್​ ನಿರ್ದೆಶಕಿಯಾಗಿದ್ದ ಅಲಹಾಬಾದ್ ಬ್ಯಾಂಕ್ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಉಷಾ ಅನಂತಸುಬ್ರಹ್ಮಣ್ಯನ್, ಪಿಎನ್ ಬಿ ಎಕ್ಸಿಕ್ಯೂಟಿವ್ ಡೈರೆಕ್ಟರ್ ಕೆ.ವಿ. ಬ್ರಹ್ಮಾಜಿ ರಾವ್ ಮತ್ತು ಸಂಜೀವ್ ಶರ್ಮ ಅವರನ್ನು ಚಾರ್ಜ್ ಶೀಟ್ ನಲ್ಲಿ ಹೆಸರಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement