ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಹಾಗೂ ರಾಷ್ಟ್ರಪತಿ ರಾಮನಾಥ ಕೋವಿಂದ್ 
ದೇಶ

ಸೋಮನಾಥ್ ಚಟರ್ಜಿ ಅಗಲಿಕೆ ನೋವು ತಂದಿದೆ: ರಾಷ್ಟ್ರಪತಿ ಕೋವಿಂದ್

ಲೋಕಸಭೆ ಮಾಜಿ ಸ್ಪೀಕರ್ ಸೋಮನಾಥ್ ಚಟರ್ಜಿ ಅಗಲಿಕೆಯಿಂದ ಬಹಳ ನೋವಾಗಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೋಮವಾರ ಹೇಳಿದ್ದಾರೆ...

ನವದೆಹಲಿ: ಲೋಕಸಭೆ ಮಾಜಿ ಸ್ಪೀಕರ್ ಸೋಮನಾಥ್ ಚಟರ್ಜಿ ಅಗಲಿಕೆಯಿಂದ ಬಹಳ ನೋವಾಗಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೋಮವಾರ ಹೇಳಿದ್ದಾರೆ. 
ಈ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಸೋಮನಾಥ್ ಚಟರ್ಜಿಯವರು ಲೋಕಸಭೆ ಸ್ಪೀಕ್ರ ಹಾಗೂ ಸಂಸತ್ತಿನ ಹಿರಿಯ ಸದಸ್ಯರಾಗಿದ್ದರು. ಸದನದಲ್ಲಿ ಹೆಚ್ಚಿನ ಬಲದಿಂದ ಉಪಸ್ಥಿತರಿರುತ್ತಿದ್ದರು. ಚಟರ್ಜಿ ಅಗಲಿಕೆ ಬಂಗಾಳ ಹಾಗೂ ಭಾರತಕ್ಕೆ ಭರಿಸಲಾಗದ ನಷ್ಟ. ಚಟರ್ಜಿಯವರ ಕುಟುಂಬದ ಕುರಿತು ಸಂತಾಪ ಸೂಚಿಸುತ್ತೇನೆಂದು ಹೇಳಿದ್ದಾರೆ. 
ಇದರಂತೆ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರೂ ಕೂಡ ಸಂತಾಪವನ್ನು ಸೂಚಿಸಿದ್ದು, ಲೋಸಸಭೆ ಮಾಜಿ ಸ್ಪೀಕರ್ ನಿಧನ ಸುದ್ದಿ ಬಹಳ ಬೇಸರವನ್ನುಂಟು ಮಾಡಿದೆ. ಸಂಸತ್ತಿನಲ್ಲಿ ಅತ್ಯುತ್ತಮ ಸದಸ್ಯರಾಗಿದ್ದರು. ಲೋಕಸಭೆಗೆ 10 ಬಾರಿ ಆಯ್ಕೆಯಾಗಿ ಬಂದಿದ್ದರು. ಸದಾಕಾಲ ಜನರ ಸಂಕಷ್ಟಗಳನ್ನು ಎಲ್ಲರ ಗಮನಕ್ಕೆ ತರುತ್ತಿದ್ದರು. ತಾವು ನಂಬಿದ್ದ ತತ್ವಗಳಿಗೆ ದೃಢವಾಗಿ ನಿಲ್ಲುತ್ತಿದ್ದರು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT