ರಾಯ್ ಪುರ: ಛತ್ತೀಸ್ ಗಡ ರಾಜ್ಯಪಾಲ ಬಲರಾಮ್ ದಾಸ್ ಟಂಡನ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ರಾಜಧಾನಿಯ ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಂಡನ್ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ನರಳುತ್ತಿದ್ದರು ಎಂದು ರಾಜಭವನ ಮೂಲಗಳು ತಿಳಿಸಿವೆ. ಇಂದು ಬೆಳಗ್ಗೆ ಅವರ ಆರೋಗ್ಯ ಸಮಸ್ಯೆ ತೀವ್ರವಾಗಿ ಉಲ್ಬಣಗೊಂಡ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಜ್ಯಪಾಲರಿಗೆ ಹೃದಯಾಘಾತವಾಗಿದ್ದು, ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ, ಅವರ ಆರೋಗ್ಯ ಗಂಭೀರವಾಗಿದ್ದು, ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ದೌಡಾಯಿಸಿದ್ದಾರೆ.
ರಾಜ್ಯಪಾಲರಿಗೆ ಚಿಕಿತ್ಸೆ ಮುಂದುವರಿದಿದ್ದು, ಇದುವರೆಗೂ ಯಾವುದೇ ಮೆಡಿಕಲ್ ಬುಲೆಟಿನ್ ಬಿಡುಗಡೆಯಾಗಿಲ್ಲ.