ಸಾಂದರ್ಭಿಕ ಚಿತ್ರ 
ದೇಶ

ಗಡಿಯಲ್ಲಿ ಪರಸ್ಪರ ಶಾಂತಿಯ ಆಶಯ ವ್ಯಕ್ತಪಡಿಸಿದ ಭಾರತ-ಚೀನಾ ಸೇನೆ

ಭಾರತ ಮತ್ತು ಚೀನಾ ಸೇನೆ ವಾಸ್ತವಿಕ ಗಡಿ ನಿಯಂತ್ರಣ ರೇಖೆ(ಎಲ್ಎಸಿ)ಯ ಬಳಿ ಪರಸ್ಪರ ಶಾಂತಿ ಕಾಪಾಡಿಕೊಳ್ಳುವ ಆಶಯ...

ಶ್ರೀನಗರ: ಭಾರತ ಮತ್ತು ಚೀನಾ ಸೇನೆ ವಾಸ್ತವಿಕ ಗಡಿ ನಿಯಂತ್ರಣ ರೇಖೆ(ಎಲ್ಎಸಿ)ಯ ಬಳಿ ಪರಸ್ಪರ ಶಾಂತಿ ಕಾಪಾಡಿಕೊಳ್ಳುವ ಆಶಯ ವ್ಯಕ್ತಪಡಿಸಿವೆ ಎಂದು ರಕ್ಷಣಾ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಡೆದ ಉಭಯ ದೇಶಗಳ ಗಡಿ ಭದ್ರತಾ ಸಿಬ್ಬಂದಿ ಸಭೆ(ಬಿಪಿಎಂ)ಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಶ್ರೀನಗರ ಮೂಲದ ರಕ್ಷಣಾ ವಕ್ತಾರ ಕರ್ನಲ್ ರಾಜೇಶ್ ಕಲಿಯಾ ಅವರು ಹೇಳಿದ್ದಾರೆ.
ಸಭೆಯಲ್ಲಿ ಬ್ರಿಗೇಡಿಯರ್ ವಿಕೆ ಪುರೋಹಿತ್ ಮತ್ತು ಕರ್ನಲ್ ಅನಿಲ್ ಕುಮಾರ್ ನೇತೃತ್ವದಲ್ಲಿ ಭಾರತೀಯ ಸಿಬ್ಬಂದಿ ಹಾಗೂ ಹಿರಿಯ ಕರ್ನಲ್ ವಾಂಗ್ ಜುನ್ ಕ್ಷಿ ಮತ್ತು ಲೆಫ್ಟಿನೆಂಟ್ ಕರ್ನಲ್ ಲಿ ಮಿಂಗ್ ಜು ಅವರ ನೇತೃತ್ವದಲ್ಲಿ ಚೀನಾ ಸಿಬ್ಬಂದಿ ಭಾಗವಹಿಸಿದ್ದರು ಎಂದು ಕಲಿಯಾ ತಿಳಿಸಿದ್ದಾರೆ.
ಉಭಯ ದೇಶಗಳ ಭದ್ರತಾ ಸಿಬ್ಬಂದಿ ಭಾರತದ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದ ನಂತರ ಬಿಪಿಎಂ ಸಭೆ ಆರಂಭಿಸಲಾಯಿತು. ಸಭೆಯಲ್ಲಿ ಶಾಂತಿ ಕಾಪಾಡಿಕೊಳ್ಳುವ ಆಶಯ, ಪರಸ್ಪರ ಶುಭಾಶಯ ವಿನಿಮಯ ಹಾಗೂ ಧನ್ವವಾದಗಳನ್ನು ತಿಳಿಸಲಾಯಿತು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಯಿತು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್ ದೇಶಗಳ ಯಾವುದೇ ಬಂದರು ಸುರಕ್ಷಿತವಲ್ಲ; ಅಮೆರಿಕದ ಕ್ರಮ "ಕಡಲ್ಗಳ್ಳತನ"ಕ್ಕೆ ಸಮ: ಇರಾನ್ ಖಡಕ್ ವಾರ್ನಿಂಗ್

West Asia War: ಇರಾನ್‌ಗೆ ಮಿಲಿಟರಿ ಬೆಂಬಲ ನೀಡಿದರೆ ಶೇ 50ರಷ್ಟು ಸುಂಕ; ಚೀನಾಗೆ ಡೊನಾಲ್ಡ್ ಟ್ರಂಪ್ ಬೆದರಿಕೆ

ಬಿಹಾರದಲ್ಲಿ ಮೊದಲ ಬಾರಿಗೆ ಬಿಜೆಪಿಗೆ CM ಗದ್ದುಗೆ! ನಾಳೆ ನಿತೀಶ್ ರಾಜೀನಾಮೆ? ನೂತನ ಮುಖ್ಯಮಂತ್ರಿ ಆಯ್ಕೆ ಸಾಧ್ಯತೆ

ಬೈಕ್ ಚಾಲನೆ ಮಾಡುತ್ತಾ Reels ರೆಕಾರ್ಡ್, ಭೀಕರ ಅಪಘಾತದಲ್ಲಿ ಯುವತಿ ಸಾವು, ಯುವಕ ಗಂಭೀರ! video

'ಬೆಂಜಮಿನ್ ನೆತನ್ಯಾಹು ಮಾಡಿದ ಫೋನ್ ಕರೆಯೇ ಅಮೆರಿಕ-ಇರಾನ್ ಶಾಂತಿ ಮಾತುಕತೆ ಹಳಿತಪ್ಪುವಂತೆ ಮಾಡಿತು'

SCROLL FOR NEXT