ಕೊಚ್ಚಿ ವಿಮಾನ ನಿಲ್ದಾಣ 
ದೇಶ

ಕೇರಳ ಪ್ರವಾಹ: ಆಗಸ್ಟ್ 18ರವರೆಗೂ ಕೊಚ್ಚಿ ವಿಮಾನ ನಿಲ್ದಾಣ ಸೇವೆ ಸ್ಥಗಿತ

ಕೇರಳದಲ್ಲಿ ಉಂಟಾಗಿರುವ ಭೀಕರ ಪ್ರವಾಹ ಪರಿಸ್ಥಿತಿ ಮುಂದುವರೆದಿದ್ದು, ಇದೇ ಮೊದಲ ಬಾರಿಗೆ ಪ್ರವಾಹದ ಹೊಡೆತಕ್ಕೆ ಸಿಲುಕಿರುವ ಕೊಚ್ಚಿ ವಿಮಾನ ನಿಲ್ದಾಣವನ್ನು 4 ದಿನಗಳ ಕಾಲ ಬಂದ್ ಮಾಡಲಾಗಿದೆ.

ಕೊಚ್ಚಿ:  ಕೇರಳದಲ್ಲಿ ಉಂಟಾಗಿರುವ ಭೀಕರ ಪ್ರವಾಹ ಪರಿಸ್ಥಿತಿ ಮುಂದುವರೆದಿದ್ದು, ಇದೇ ಮೊದಲ ಬಾರಿಗೆ ಪ್ರವಾಹದ ಹೊಡೆತಕ್ಕೆ ಸಿಲುಕಿರುವ ಕೊಚ್ಚಿ ವಿಮಾನ ನಿಲ್ದಾಣವನ್ನು 4 ದಿನಗಳ ಕಾಲ ಬಂದ್ ಮಾಡಲಾಗಿದೆ.
ಮುಂಗಾರು ಮಳೆಗೆ ತತ್ತರಿಸಿ ಹೋಗಿರುವ ಕೇರಳದಲ್ಲಿ  ಈಗಾಗಲೇ 47 ಮಂದಿ ಸಾವಿಗೀಡಾಗಿದ್ದು, 5 ಮಂದಿ ಕಾಣೆಯಾಗಿದ್ದಾರೆ. 10 ಸಾವಿರ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ. ಇದರ ನಡುವೆಯೇ 
ಕೊಚ್ಚಿನ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದ್ದು, ಆಗಸ್ಟ್‌ 18ರ ಮಧ್ಯಾಹ್ನ 2 ಗಂಟೆಯ ವರೆಗೂ ಕೊಚ್ಚಿನ್‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ತುಂಬಿರುವ ನೀರನ್ನು ಹೊರತೆಗೆಯಲು ಹಾಗೂ ಒಣಗಿಸಲು ಶ್ರಮಿಸುತ್ತಿರುವುದಾಗಿ ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ. 
14 ಜಿಲ್ಲೆಗಳ ಪೈಕಿ 12 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ವಯನಾಡ್‌, ಕಲ್ಲಿಕೋಟೆ, ಕಣ್ಣೂರ್‌, ಕಾಸರಗೂಡು, ಮಲಪ್ಪುರಂ, ಪಾಲಕ್ಕಾಡ್‌, ಇಡುಕ್ಕಿ ಹಾಗೂ ಎರ್ನಾಕುಲಂನಲ್ಲಿ ಆಗಸ್ಟ್‌ 16ರ ವರೆಗೂ ಎಚ್ಚರ ವಹಿಸುವಂತೆ ಸೂಚಿಸಲಾಗಿದೆ.  ಅನೇಕ ಭಾಗಗಳಲ್ಲಿ ನೀರಿನ ಮಟ್ಟದಲ್ಲಿ ಏರಿಕೆಯಿಂದಾಗಿ ಸೇತುಗಳು ಮುಳುಗಡೆಯಾಗಿವೆ ಹಾಗೂ ಕೊಚ್ಚಿ ಹೋಗಿದ್ದು ರೈಲ್ವೆ ಸಂಚಾರ ವ್ಯತ್ಯಯಗೊಂಡಿದೆ. ತಿರುವನಂತಪುರಂ–ಕನ್ಯಾಕುಮಾರಿ ಮಾರ್ಗ ಸೇರಿ ಹಲವು ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT