ಏಮ್ಸ್ ಗೆ ಮೋದಿ ಭೇಟಿ, ವಾಜಪೇಯಿ ಆರೋಗ್ಯ ಕುರಿತು ವಿಚಾರಣೆ 
ದೇಶ

ನವದೆಹಲಿ: ಏಮ್ಸ್ ಗೆ ಮೋದಿ ಭೇಟಿ, ವಾಜಪೇಯಿ ಆರೋಗ್ಯ ಕುರಿತು ವಿಚಾರಣೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಗೆ ಭೇಟಿ ನೀಡಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ....

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಗೆ ಭೇಟಿ ನೀಡಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯದ ಕುರಿತು ವಿಚಾರಿಸಿದ್ದಾರೆ.
ಆದರೆ ವಾಜಪೇಯಿ ಅವರ ಆರೋಗ್ಯದ ಕುರಿತಂತೆ ಆಸ್ಪತ್ರೆಯು ಇದುವರೆಗೆ ಯಾವ ಅಧಿಕೃತ ಹೇಳಿಕೆ ನೀಡಿಲ್ಲ.
ಮೋದಿ ಏಮ್ಸ್ ಭೇಟಿಗೆ ಮುನ್ನ ಕೇಂದ್ರ ಟೆಕ್ಸ್ ಟೈಲ್ಸ್ ಸಚಿವೆ ಸ್ಮೃತಿ ಇರಾನಿ ಕೂಡ ಏಮ್ಸ್ ಗೆ ಭೇಟಿ ಕೊಟ್ಟಿದ್ದಾರೆ.
ಮೂತ್ರಪಿಂಡದ ಸೋಂಕು, ಎದೆ ನೋವು,  ಮೂತ್ರದ ಸೋಂಕು ಇದರಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ವಾಜಪೇಯಿ ಜೂನ್ 11 ರಂದು ಏಮ್ಸ್ ಗೆ ದಾಖಲಾಗಿದ್ದಾರೆ.
93 ವರ್ಷ ವಯಸ್ಸಿನ ಬಿಜೆಪಿ ಮುಖಂಡ ವಾಜಪೇಯಿ ಮಧುಮೇಹದಿಂದ ಬಳಲುತ್ತಿದ್ದಾರೆ. 2009 ರಲ್ಲಿ ಪಾರ್ಶ್ವವಾಯು ಹೊಡೆತಕ್ಕೆ ಒಳಗಾಗಿದ್ದ ವಾಜಪೇಯಿ ಅಲ್ಲಿಂದೀಚೆಗೆ ನೆನಪಿನ ಶಕ್ತಿಯ ಕೊರತೆಯನ್ನು ಅನುಭವಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!