ಸಂಗ್ರಹ ಚಿತ್ರ 
ದೇಶ

ಭೀಕರ ಪ್ರವಾಹಕ್ಕೆ ತುತ್ತಾದ ಕೇರಳ ಮರು ನಿರ್ಮಾಣಕ್ಕೆ ಕೈ ಜೋಡಿಸಿ: ಸಿಎಂ ಪಿಣರಾಯಿ ವಿಜಯನ್ ಮನವಿ

ಮುಂಗಾರು ಮಳೆ ಆರ್ಭಟಕ್ಕೆ ತತ್ತರಿಸಿ ಹೋಗಿರುವ ಕೇರಳ ಮರು ನಿರ್ಮಾಣಕ್ಕೆ ಕೈ ಜೋಡಿಸಿ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಮನವಿ ಮಾಡಿದ್ದಾರೆ.

ತಿರುವನಂತಪುರಂ: ಮುಂಗಾರು ಮಳೆ ಆರ್ಭಟಕ್ಕೆ ತತ್ತರಿಸಿ ಹೋಗಿರುವ ಕೇರಳ ಮರು ನಿರ್ಮಾಣಕ್ಕೆ ಕೈ ಜೋಡಿಸಿ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಮನವಿ ಮಾಡಿದ್ದಾರೆ.
ಈ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಪಿಣರಾಯಿ ವಿಜಯನ್ ಅವರು, ಮುಖ್ಯಮಂತ್ರಿಗಳ ಪರಿಹಾರ ನಿಧಿ ಖಾತೆಯ ವಿವರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವ ಮೂಲಕ ಧನ ಸಹಾಯ ಮಾಡುವಂತೆ ಸಿಎಂ ಮನವಿ ಮಾಡಿದ್ದಾರೆ. 
ಇತ್ತ ಸಿಎಂ ಮನವಿಗೆ ಕೇರಳ ಚಿತ್ರರಂಗ ಸ್ಪಂದಿಸಿದ್ದು, ಮಲಯಾಳಂ ಚಿತ್ರರಂಗದ ಅಧ್ಯಕ್ಷ ಮೋಹನ್ ಲಾಲ್ ಅವರು ಸಿಎಂ ಪರಿಹಾರ ನಿಧಿಗೆ 10 ಲಕ್ಷ ರೂ ಹಣ ನೀಡಿದ್ದು, ತೆಲುಗು ಚಿತ್ರರಂಗದ ಖ್ಯಾತ ನಟರಾದ ಅಲ್ಲು ಅರ್ಜುನ್ 25 ಲಕ್ಷ ಮತ್ತು ಅರ್ಜುನ್ ರೆಡ್ಡಿ ಖ್ಯಾತಿಯ ವಿಜಯ್ ದೇವರಕೊಂಡ 5 ಲಕ್ಷ ರೂ ನೀಡಿದ್ದಾರೆ. ಅಂತೆಯೇ ದೇಶದ ವಿವಿಧ ಮೂಲೆಗಳಿಂದ ಸಿಎಂ ಪರಿಹಾರ ನಿಧಿಗೆ ವ್ಯಾಪಕ ಧನ ಸಹಾಯ ಹರಿದು ಬರುತ್ತಿದೆ. 
ಕೇಂದ್ರ ಸರ್ಕಾರ, ವಿಪಕ್ಷಗಳಿಗೆ ಧನ್ಯವಾದ ಸಲ್ಲಿಸಿದ ವಿಜಯನ್
ಇದೇ ವೇಳೆ ಕೇರಳ ಪ್ರವಾಹಕ್ಕೆ ತುರ್ತಾಗಿ ಸ್ಪಂದಿಸಿದೆ ಕೇಂದ್ರ ಸರ್ಕಾರಕ್ಕೆ ಸಿಎಂ ವಿಜಯನ್ ಧನ್ಯವಾದ ತಿಳಿಸಿದ್ದು, ಕೇಂದ್ರದ ಮೇಲೆ ಒತ್ತಡ ಹೇರಿದ ವಿಪಕ್ಷಗಳಿಗೂ ಕೃತಜ್ಞತೆ ಸಲ್ಲಿಕೆ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT