ನವದೆಹಲಿ: 72 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.
ಸ್ವಾತಂತ್ರ್ಯ ದಿನದಂದು ಕಾಶ್ಮೀರದ ಬಗ್ಗೆಯೂ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಅಟಲ್ ಬಿಹಾರಿ ವಾಜಪೇಯಿ ಅವರನ್ನು ಸ್ಮರಿಸಿದ್ದು, ಅಟಲ್ ಬಿಹಾರಿ ವಾಜಪೇಯಿ ಅವರು ಇನ್ಸಾನಿಯತ್, ಕಾಶ್ಮೀತ್, ಜಮುರಿಯತ್ ಎಂದಿದ್ದರು. ಜಮ್ಮು-ಕಾಶ್ಮೀರದ ಪ್ರತಿ ಸಮಸ್ಯೆಯನ್ನು ಜನತೆಯೊಂದಿಗಿನ ಪ್ರೀತಿಯಿಂದ ಬಗೆಹರಿಸಬಹುದೇ ಬದಲು ಬುಲೆಟ್ ಗಳಿಂದಲ್ಲ ಎಂದು ಹೇಳಿದ್ದೇನೆ. ನಮ್ಮ ಸರ್ಕಾರ ಜಮ್ಮು-ಕಾಶ್ಮೀರದ ಎಲ್ಲಾ ವರ್ಗದ ಜನತೆಯ ಅಭಿವೃದ್ಧಿಗೂ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.