ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ (93) ಆ.16 ರಂದು ಸಂಜೆ ನಮ್ಮನ್ನು ಅಗಲಿದ್ದು, ದೇಶಾದ್ಯಂತ 7 ದಿನಗಳ ಶೋಕಾಚರಣೆಗೆ ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.
ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ನಡೆದ ತುರ್ತು ಸಚಿವ ಸಂಪುಟ ಸಭೆಯಲ್ಲಿ ಸಭೆಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನಕ್ಕೆ ರಾಷ್ಟ್ರಿಯ ಶೋಕಾಚರಣೆ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದ್ದು. ಇದೇ ವೇಳೆ ಏಮ್ಸ್ ನಿಂದ ಅಟಲ್ ಬಿಹಾರಿ ವಾಜಪೇಯಿ ಅವರ ಪಾರ್ಥಿವ ಶರೀರವನ್ನು ದೆಹಲಿಯ ಕೃಷ್ಣ ಮೆನನ್ ಮಾರ್ಗ್ ನಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಗುತ್ತಿದೆ.
ವಾಜಪೇಯಿ ಅವರ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸಲಾಗುತ್ತಿದ್ದು, ನಾಳೆ ಸಂಜೆಯೊಳಗೆ ಯಮುನಾ ನದಿ ದಡದಲ್ಲಿರುವ ರಾಜ್ ಘಾಟ್ ನಲ್ಲಿ ಅಂತ್ಯಸಂಸ್ಕಾರ ಮಾಡಲಾಗುತ್ತದೆ ಇದಕ್ಕೂ ಮುನ್ನ ಬಿಜೆಪಿಯ ಕೇಂದ್ರ ಕಚೇರಿಯಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. ರಾಜ್ ಘಾಟ್ ನಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮಾರಕ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ಒಂದೂ ವರೆ ಎಕರೆ ಮಂಜೂರು ಮಾಡಲಿದೆ.