ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್
ನವದೆಹಲಿ: ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ಆರೋಗ್ಯ ಸ್ಥಿತಿ ಮತ್ತಷ್ಟು ವಿಷಮಗೊಂಡಿರುವ ಹಿನ್ನಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದು, ಆರೋಗ್ಯ ಸ್ಥಿತಿ ಕುರಿತು ವಿಚಾರಿಸುತ್ತಿದ್ದಾರೆಂದು ಗುರುವಾರ ತಿಳಿದುಬಂದಿದೆ.
ಕೇಜ್ರಿವಾಲ್ ಅವರು ಇಂದಿಗೆ 50ನೇ ವಸಂತಕ್ಕೆ ಕಾಲಿಟ್ಟಿದ್ದು, ವಾಜಪೇಯಿಯವರ ಸ್ಥಿತಿ ಗಂಭೀರವಾಗಿರುವ ಹಿನ್ನಲೆಯಲ್ಲಿ ತಮ್ಮ ಜನ್ಮದಿನದ ಸಂಭ್ರಮವನ್ನು ಆಚರಣೆ ಮಾಡದಂತೆ ಬೆಂಬಲಿಗರಿಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಸೂಚನೆನೀಡಿದ್ದಾರೆಂದು ತಿಳಿದುಬಂದಿದೆ.
ಕೇಜ್ರಿವಾಲ್ ಅವರು ಇದೀಗ ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದು, ಕೇಜ್ರಿವಾಲ್ ಅವರೊಂದಿಗೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಸಾಥ್ ನೀಡಿದ್ದಾರೆ.
ವಾಜಪೇಯಿಯವರ ಆರೋಗ್ಯ ಸ್ಥಿತಿ ಕುರಿತಂತೆ ಈ ಹಿಂದೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದ ಕೇಜ್ರಿವಾಲ್ ಅವರು, ಅಟಲ್ ಜೀ ಅವರ ಆರೋಗ್ಯ ಸ್ಥಿತಿ ಕುರಿತ ಮಾಹಿತಿ ತಿಳಿದು ಬಹಳ ಬೇಸರವಾಗಿದೆ. ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದರು.
ಕೇಜ್ರಿವಾಲ್ ಅವರ ಮಾಧ್ಯಮ ಸಲಹೆಗಾರ ನಾಗೇಂದರ್ ಶರ್ಮಾ ಮಾತನಾಡಿ, ಮಾಜಿ ಪ್ರಧಾನಮಂತ್ರಿ ವಾಜಪೇಯಿಯವರ ಆರೋಗ್ಯ ಸ್ಥಿತಿಯನ್ನು ಗಮನದಲ್ಲಿಟ್ಟು, ಜನ್ಮ ದಿನದ ಸಂಭ್ರಮವನ್ನು ಆಚರಿಸದಿರಲು ಕೇಜ್ರಿವಾಲ್ ನಿರ್ಧರಿಸಿದ್ದಾರೆ. ಅಲ್ಲದೆ, ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರು ಸಂಭ್ರವನ್ನಾಚರಿಸದಂತೆ ಹಾಗೂ ಸಂಭ್ರಮ ಆಚರಿಸಲು ನಿವಾಸಕ್ಕೆ ಬಾರದಂತೆ ಮನವಿ ಮಾಡಿಕೊಂಡಿದ್ದಾರೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics