ಶಿವಕುಮಾರ ಸ್ವಾಮೀಜಿ, ಪೇಜಾವರ ಶ್ರೀ
ತುಮಕೂರು/ಬೆಂಗಳೂರು: ದಾರ್ಶನಿಕ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನಕ್ಕೆ ಸಿದ್ಧಗಂಗಾ ಮಠದ ಸ್ವಾಮೀಜಿ ಶಿವಕುಮಾರ ಸ್ವಾಮೀಜಿ ಹಾಗೂ ಪೇಜಾವರ ಶ್ರೀಗಳು ಕಂಬನಿ ಮಿಡಿದಿದ್ದಾರೆ.
ಎಬಿ ವಾಜಪೇಯಿ ನಿಧನದ ಸುದ್ದಿ ಕೇಳಿ ಮನಸ್ಸಿಗೆ ನೋವಾಯಿತು. ಅವರೊಬ್ಬ ಮಹಾನ್ ರಾಜಕಾರಣಿ ಎಂದು ಸಿದ್ಧಗಂಗಾ ಮಠದ ಸ್ವಾಮಿಜೀ ಶಿವಕುಮಾರ ಸ್ವಾಮೀಜಿ ಅವರು ಹೇಳಿದ್ದಾರೆ.
ವಾಜಪೇಯಿ ವಿಶ್ವದ ಮಹಾನ್ ನಾಯಕರಲ್ಲಿ ಒಬ್ಬರು. ವಿರೋಧಿಗಳು ಕೂಡ ಅವರನ್ನು ಕೊಂಡಾಡುತ್ತಿದ್ದರು. ಅವರ ನಿಧನ ದೇಶಕ್ಕೆ ತುಂಬಲಾರದ ದೊಡ್ಡ ನಷ್ಟ ಎಂದು
ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಸ್ವಾಮೀಜಿ ಅವರು ಹೇಳಿದ್ದಾರೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಸಂಜೆ 5.05 ಗಂಟೆಗೆ ಅವರು ವಿಧಿವಶರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics