ನವದೆಹಲಿ: ಅಜಾತ ಶತ್ರು, ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ನಿಧನ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ಮೋದಿ ಸೇರಿದಂತೆ ರಾಜಕೀಯ ಮುಖಂಡರು, ರಾಜ್ಯಗಳ ಮುಖ್ಯಮಂತ್ರಿಗಳು, ಗಣ್ಯರು ಅಂತಿಮ ದರ್ಶನ ಪಡೆದರು.
ದೆಹಲಿಯ ಕೃಷ್ಣಮೆನನ್ ಮಾರ್ಗ್ ನಲ್ಲಿರುವ ವಾಜಪೇಯಿ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ. ಬಿಜೆಪಿ ಮುಖಂಡ ವಾಜಪೇಯಿ ಅವರ ಆಪ್ತ ಎಲ್ ಕೆ ಅಡ್ವಾಣಿ, ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ, ರಾಜನಾಥ್ ಸಿಂಗ್ ಸೇರಿದಂತೆ ಇತರ ರಾಜ್ಯಗಳ ಮುಖ್ಯಮಂತ್ರಿಗಳು, ರಾಜಕೀಯ ಮುಖಂಡರು ಅಂತಿಮ ದರ್ಶನ ಪಡೆದರು.
ಅಪಾರ ಸಂಖ್ಯೆಯಲ್ಲಿ ಗಣ್ಯರು ವಾಜಪೇಯಿ ಅವರ ನಿವಾಸಕ್ಕೆ ತೆರಳಿದ್ದು ಅಂತಿಮ ದರ್ಶನ ಪಡೆಯುತ್ತಿದ್ದಾರೆ.
ಇನ್ನು 10 ಗಂಟೆ ನಂತರ ನವದೆಹಲಿಯಲ್ಲಿರುವ ಬಿಜೆಪಿಯ ಕೇಂದ್ರ ಕಚೇರಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ಆ ನಂತರ ಮೆರವಣಿಗೆ ಮೂಲಕ ಪಾರ್ಥಿವ ಶರೀರವನ್ನು ರಾಜ್ ಘಾಟ್ ಗೆ ಕೊಂಡ್ಯೊಯ್ದು ವಿಧಿವಿಧಾನ ನೆರವೇರಿಸಲಿದ್ದಾರೆ.