ದೇಶ

ಮಾಜಿ ಪ್ರಧಾನಿ ವಾಜಪೇಯಿ ವಿಧಿವಶ: ಮಧ್ಯಾಹ್ನ 1ರವರೆಗೆ ಮಾತ್ರ ಕಾರ್ಯನಿರ್ವಹಿಸಲಿವೆ ನ್ಯಾಯಾಲಯಗಳು

Manjula VN
ನವದೆಹಲಿ: ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರು ಇಹಲೋಕ ತ್ಯಜಿಸುವ ಹಿನ್ನಲೆಯಲ್ಲಿ ದೆಹಲಿ ಹೈಕೋರ್ಟ್ ಹಾಗೂ ಇತರೆ ಎಲ್ಲಾ ಜಿಲ್ಲಾ ನ್ಯಾಯಾಲಯಗಳು ಶುಕ್ರವಾರ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ ಕಾರ್ಯನಿರ್ವಹಿಸಲಿವೆ ಎಂದು ತಿಳಿದುಬಂದಿದೆ. 
ವಾಜಪೇಯಿಯವರ ಪಾರ್ಥೀವ ಶರೀರವನ್ನು ಕಷ್ಣ ಮೆನನ್ ಮಾರ್ಗ್ ದಲ್ಲಿರುವ ಅವರ ನಿವಾಸದಿಂದ ಬಿಜೆಪಿ ಕೇಂದ್ರ ಕಚೇರಿಗೆ ಕಂಡೊಯ್ಯಲಾಗಿದ್ದು, ದೆಹಲಿಯ ದೀನ ದಯಾಳ್ ಉಪಾಧ್ಯಯ ಮಾರ್ಗದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮಧ್ಯಾಹ್ನ 1.30ರವರೆಗೂ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 
ಹೀಗಾಗಿ ನ್ಯಾಯಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ವಾಜಪೇಯಿಯವರ ಅಂತಿಮ ದರ್ಶನ ಪಡೆಯುವ ಸಲುವಾಗಿ ನ್ಯಾಯಾಲಯದ ಕಾರ್ಯವನ್ನು ಇಂದು ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ ನಿಗದಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
SCROLL FOR NEXT