ಪ್ರವಾಹದಲ್ಲಿ ಸಿಲುಕಿರುವ ಜನ 
ದೇಶ

ಕೇರಳ ಪ್ರವಾಹ: ಸಾವಿನ ಸಂಖ್ಯೆ 324ಕ್ಕೆ ಏರಿಕೆ, ಪ್ರಧಾನಿ ಮೋದಿ ಭೇಟಿ ಇಂದು

ಕೇರಳದಲ್ಲಿ ಸುರಿಯುತ್ತಿರುವ ಮಹಾಮಳೆ ಕ್ಷಣ ಕ್ಷಣಕ್ಕೂ ತನ್ನ ರೌದ್ರಾವತಾರವನ್ನು ಹೆಚ್ಚಿಸುತ್ತಿದ್ದು, ಕೇವಲ 24 ಗಂಟೆಗಳ...

ತಿರುವನಂತಪುರಂ: ಕೇರಳದಲ್ಲಿ ಸುರಿಯುತ್ತಿರುವ ಮಹಾಮಳೆ ಕ್ಷಣ ಕ್ಷಣಕ್ಕೂ ತನ್ನ ರೌದ್ರಾವತಾರವನ್ನು ಹೆಚ್ಚಿಸುತ್ತಿದ್ದು, ಕೇವಲ 24 ಗಂಟೆಗಳ ಅವಧಿಯಲ್ಲಿ ಮಳೆಯಿಂದಾಗಿ ಬರೊಬ್ಬರಿ 106 ಮಂದಿ ಸಾವಿಗೀಡಾಗಿದ್ದು, ಇದರೊಂದಿಗೆ ಸವಾನಿ ಸಂಖ್ಯೆ 324ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಪ್ರವಾಹದಿಂದ 324 ಮಂದಿ ಜೀವ ಕಳೆದುಕೊಂಡಿದ್ದು, ಸುಮಾರು 2 ಲಕ್ಷ ಮಂದಿ ಪ್ರವಾಹ ಸಂತ್ರಸ್ಥರ ಕ್ಯಾಂಪ್ ಗಳಲ್ಲಿದ್ದಾರೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರು ಶುಕ್ರವಾರ ಟ್ವೀಟ್ ಮಾಡಿದ್ದಾರೆ.
ಕೇರಳ ಕಳೆದ 100 ವರ್ಷಗಳಲ್ಲೇ ಅತ್ಯಂತ ಭೀಕರ ಪ್ರವಾಹ ಎದುರಿಸುತ್ತಿದ್ದು, 80 ಡ್ಯಾಮ್ ಗಳ ಗೇಟ್ ಅನ್ನು ತೆರೆಯಲಾಗಿದೆ ಎಂದು ಸಿಎಂ ವಿಜಯನ್ ತಿಳಿಸಿದ್ದಾರೆ.
ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದ್ದು, ಇದುವರೆಗೆ 4 ಸಾವಿರ ಜನರನ್ನು ರಕ್ಷಿಸಲಾಗಿದ್ದು,
ಸಂತ್ರಸ್ತರ ರಕ್ಷಣೆಗೆ ಭಾರತೀಯ ಸೇನೆಯ ಕಾಲ್ದಳ, ವಾಯುದಳ ಮತ್ತು ನೌಕಾದಳಗಳ ಸಿಬ್ಬಂದಿಗಳು ನಿರಂತರವಾಗಿ ಶ್ರಮಿಸುತ್ತಿದ್ದರೂ, ಸಾವಿನ ಸಂಖ್ಯೆ ಮಾತ್ರ ದಿನೇ ದಿನೇ ಏರಿಕೆಯಾಗುತ್ತಲೇ ಇದೆ. 
ಹೀಗಾಗಿ ಕೇರಳಕ್ಕೆ ಹೆಚ್ಚುವರಿಯಾಗಿ 50 ಎನ್ ಡಿಆರ್ ಎಫ್ ತಂಡಗಳನ್ನು ರವಾನೆ ಮಾಡಲಾಗಿದ್ದು, ಇದರ ಜೊತೆಗೆ 420 ಸಿಬ್ಬಂದಿಗಳು, 23 ಹೆಲಿಕಾಪ್ಟರ್ ಗಳನ್ನು ಮತ್ತು 200 ಯಾಂತ್ರಿಕ ಬೋಟ್ ಗಳನ್ನು ಕೇರಳಕ್ಕೆ ರವಾನೆ ಮಾಡಲು ನಿರ್ಧರಿಸಲಾಗಿದೆ. ಅಂತೆಯೇ ಕೊಚ್ಚಿ ವಿಮಾನ ನಿಲ್ದಾಣ ಆಗಸ್ಟ್ 26ರವರೆಗೂ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.
ಇನ್ನು ಪ್ರವಾಹ ಪೀಡಿತ ಕೇರಳಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದು, ಖುದ್ದು ಮೋದಿ ಕೇರಳದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ ಮಾಹಿತಿ ಸಂಗ್ರಹಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!