ಕೇರಳಕ್ಕೆ ಆಗಮಿಸಿದ ಪ್ರಧಾನಿ ಮೋದಿ 
ದೇಶ

ಭೀಕರ ಪ್ರವಾಹ: ಕೇರಳಕ್ಕೆ ಆಗಮಿಸಿದ ಪ್ರಧಾನಿ ಮೋದಿಯಿಂದ ಪರಿಸ್ಥಿತಿ ಅವಲೋಕನ

ಮಳೆಹಾನಿ, ಭಾರೀ ಪ್ರವಾಹದಿಂದ ಕಂಗೆಟ್ಟಿರುವ ದೇವರ ಸ್ವಂತ ನಾಡು ಕೇರಳಕ್ಕೆ ಶುಕ್ರವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಅವರು ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ.

ತಿರುವನಂತಪುರಂ: ಮಳೆಹಾನಿ, ಭಾರೀ ಪ್ರವಾಹದಿಂದ ಕಂಗೆಟ್ಟಿರುವ ದೇವರ ಸ್ವಂತ ನಾಡು ಕೇರಳಕ್ಕೆ ಶುಕ್ರವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಅವರು ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ.
"ಕೇರಳದಲ್ಲಿನ ಪ್ರವಾಹ ಪರಿಸ್ಥಿತಿಯನ್ನು ಅಲ್ಲಿಗೆ ತೆರಳಿಯೇ ತಿಳಿದುಕೊಳ್ಳುಲ್ವೆ" ಎಂದು ಮೋದಿ ಈ ಮುನ್ನ ಟ್ವೀಟ್ ಮಾಡಿದ್ದರು.
ಕಳೆದ ಕೆಲವು ದಿನಗಳಿಂದ ಕೇರಳದಲ್ಲಿ ನಿರಂತರ ಮಳೆ ಬೀಳುತ್ತಿರುವುದರಿಂದ, ರಾಜ್ಯದ ಅನೇಕ ಭಾಗಗಳಲ್ಲಿ ಭೀಕರ ಪ್ರವಾಹ ಮತ್ತು ಭೂಕುಸಿತ ಉಂಟಾಗಿದೆ. ಇಲ್ಲಿಯವರೆಗೆ 324 ಜನರು ಪ್ರವಾಹದಿಂದಾಗಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕೇರಳದ ಮುಖ್ಯಮಂತ್ರಿ ಕಚೇರಿ ಮಾಹಿತಿ ನೀಡಿದೆ.
ಗುರುವಾರ, ಪ್ರಧಾನಿ ನರೇಂದ್ರ ಮೋದಿ ಅವರು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಡನೆ ದೂರವಾಣಿಯಲ್ಲಿ ಮಾತನಾಡಿದ್ದರು.ಆಗ ಸಧ್ಯದ ಪರಿಸ್ಥಿತಿ ಅವಲೋಕನಕಾಗಿ ತಾನು ಪ್ರವಾಹ ಪೀಡಿತ ರಾಜ್ಯಕ್ಕೆ ಆಗಮಿಸುವುದಾಗಿ ಹೇಳಿದ್ದರು. ರಾಜ್ಯದಲ್ಲಿ ಪರಿಸ್ಥಿತಿ ತೀರಾ ಕೆಟ್ಟದಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಇದಾಗಲೇ ರಕ್ಷಣಾ ಪಡೆಗಳನ್ನು ನಿಯೋಜಿಸಿ ಪರಿಹಾರ ಕಾರ್ಯಗಳನ್ನು ಪ್ರಾರಂಭಿಸಿದೆ.
ಪರಿಹಾರ ಕಾರ್ಯಗಳನ್ನು ಇನ್ನಷ್ಟು ಚುರುಕುಗೊಳಿಸಲು ಹೆಚ್ಚುವರಿ ಸಹಾಯಕರು,  ದೋಣಿಗಳು ಮತ್ತು ಹೆಲಿಕಾಪ್ಟರ್ ಗಳನ್ನು ಸೇರಿಸಿಕೊಳ್ಳಲು ಸೇನೆ, ವಾಯುಪಡೆ, ನೌಕಾಪಡೆ,  ಕೋಸ್ಟ್ ಗಾರ್ಡ್ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳಿಗೆ ಸಹಾಯಕ್ಕಾಗಿ ಕೋರಲಾಗಿದೆ. 
ವಿವಿಧ ರಾಜ್ಯಸರ್ಕಾರಗಳು ಕೇರಳ ನೆರೆಹಾನಿ ಸಂತ್ರಸ್ತರಿಗೆ ನೆರವು ಘೋಷಿಸಿದ್ದು ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ 10 ಕೋಟಿ ಸಹಾಯಧನ ಘೋಷಣೆ ಂಆಡಿದ್ದಾರೆ. ಇನ್ನು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಹ ಕೇರಳಿಗರ ನೆರವಿಗೆ ಧಾವಿಸಿದ್ದು 10 ಕೋಟಿ ನೆರವನ್ನು ಘೊಷಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!