ಎಬಿ ವಾಜಪೇಯಿ 
ದೇಶ

ಪುಷ್ಪಾಲಂಕೃತ ವಾಹನದಲ್ಲಿ ಸಾಗಿದ 'ಅಟಲ್ ಜೀ' ಪಾರ್ಥಿವ ಶರೀರದ ಅಂತಿಮ ಯಾತ್ರೆ!

ಪುಷ್ಪಾಲಂಕೃತಗೊಂಡಿರುವ ಸೇನಾ ವಾಹನದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ಸಾಗಿದೆ...

ನವದೆಹಲಿ: ಪುಷ್ಪಾಲಂಕೃತಗೊಂಡಿರುವ ಸೇನಾ ವಾಹನದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ಸಾಗಿದೆ. 
ದೆಹಲಿಯ ಕೃಷ್ಣಮೆನನ್ ರಸ್ತೆಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಅವರ ಮನೆಯಿಂದ ಅಂತಿಮ ಯಾತ್ರೆ ಆರಂಭಗೊಂಡಿದೆ. ಬಿಜೆಪಿಯ ಕೇಂದ್ರ ಕಚೇರಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 
ಕೃಷ್ಣಮೆನನ್ ಮಾರ್ಗ್, ಸುನೇರಿ ಭಾಗ್ ರಸ್ತೆ, ತುಘಲಕ್ ರಸ್ತೆ, ತೀಸ್ ಹಜಾರಿ ರಸ್ತೆ, ಜನಪಥ್ ರಸ್ತೆ ಮಾನ್ ಸಿಂಗ್ ರಸ್ತೆ, ಶಹಜಹಾನ್ ರಸ್ತೆ, ರಾಜಪತ್ ರಸ್ತೆ, ತಿಲಕ್ ರಸ್ತೆ ಮೂಲಕ ಪಾರ್ಥಿವ ಶರೀರದ ಅಂತಿಮ ಯಾತ್ರೆ ಬಿಜೆಪಿ ಕೇಂದ್ರ ಕಚೇರಿಗೆ ತಲುಪಲಿದೆ. 
ಅಂತಿಮ ಯಾತ್ರೆ ಸಾಗುತ್ತಿರುವ ರಸ್ತೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದು ಅಟಲ್ ಬಿಹಾರಿ ಅಮರ್ ರಹೇ, ವಂದೇ ಮಾತರಂ ಘೋಷಣೆಗಳನ್ನು ಕೂಗುತ್ತಾ  ಅಂತಿಮ ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. 
ಅಂತಿಮ ದರ್ಶನದ ಬಳಿಕ ದೆಹಲಿಯ ರಾಜ್ ಘಾಟ್ ನಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ವಿಧಿವಿಧಾನ ನೆರವೇರಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!