ನವದೆಹಲಿ: ಕೇರಳ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರಮೋದಿ ಅವರಿಗೆ ಮನವಿ ಮಾಡಿದ್ದಾರೆ.
ಆಗಸ್ಟ್ 8 ರಿಂದ ಉಂಟಾಗಿರುವ ಪ್ರವಾಹದಿಂದಾಗಿ 324 ಜನರು ಸಾವನ್ನಪ್ಪಿದ್ದು, ಸುಮಾರು 3.14 ಲಕ್ಷ ಜನರು ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ.ಮಿಲಿಯನ್ ಜನರ ಮುಂದಿನ ಬದುಕಿಗಾಗಿ ಕೇರಳ ಪ್ರವಾಹವನ್ನು ವಿಳಂಬ ನೀತಿ ಅನುಸರಿಸದೆ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕೆಂದು ರಾಹುಲ್ ಗಾಂಧಿ ಟ್ವಿಟರ್ ಮೂಲಕ ಪ್ರಧಾನಿಗೆ ಮನವಿ ಮಾಡಿಕೊಂಡಿದ್ದಾರೆ.
ಅಗತ್ಯವಿರುವವರಿಗೆ ಸಹಾಯ ಮಾಡಲು ನಮ್ಮ ಎಲ್ಲಾ ಸಂಪನ್ಮೂಲಗಳನ್ನು ಮತ್ತು ಜನರನ್ನು ಕೇಂದ್ರೀಕರಿಸಿ ಎಂದು ರಾಹುಲ್ ಗಾಂಧಿ ಮತ್ತೊಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.