ತಿರುಪತಿ: ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನೊಯಾ ಗಾಂಧಿ ಅವರ ಅಳಿಯ, ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಇಂದು (ಶನಿವಾರ) ತಿರುಮಲ ವೆಂಕಟೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.
ಶನಿವಾರ ಬೆಳಿಗ್ಗೆ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದ ವಾದ್ರಾ ಅವರನ್ನು ಟಿಟಿಡಿಯ ಅಧಿಕಾರಿಗಳು ಆದರದಿಂದ ನೋಡಿಕೊಂಡಿದ್ದು ದರ್ಶನ ಪಡೆದ ಬಳಿಕ ಅವರಿಗೆ ಪ್ರಸಾದವನ್ನೂ ವಿತರಿಸಿದ್ದಾರೆ.
ದೇವರ ದರ್ಶನ ಬಳಿಕ ಮಾದ್ಯಮದವರೊಂದಿಗೆ ಮಾತನಾಡಿದ ವಾದ್ರಾ ಸೋನಿಯಾ ಗಾಂಧಿಯವರ ಒಳ್ಳೆಯ ಆರೋಗ್ಯಕ್ಕಾಗಿ ದೇವರಿಗೆ ಪ್ರಾರ್ಥಿಸಿದ್ದೇನೆ. ಎಂದು ಹೇಳಿದರು. ತಾವು ಭಾರತದಾದ್ಯಂತ ತೀರ್ಥಯಾತ್ರೆ ಕೈಗೊಳ್ಳುತ್ತೇನೆ ಎಂದು ಅವರು ಹೇಳಿದ್ದಾರೆ.
ದೇಶದಲ್ಲಿ ಜನರಿಗೆ ಬದಲಾವಣೆಯ ಅವಶ್ಯಕತೆಯಿದೆ ಎಂದ ವಾದ್ರಾ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಬರ್ಟ್ ವಾದ್ರಾ ಅವರು ಯುಪಿಎ ಸರ್ಕಾರದ ಅವಧಿಯಲ್ಲಿ ತಮ್ಮ ಅಧಿಕಾರವನ್ನು ಬಳಸಿಕೊಂಡು ಹಣ ದುರ್ಬಳಕೆ ಮಾಡಿದ್ದಾರೆ ಎನ್ನಲಾಗಿದ್ದು ಪ್ರಿಯಾಂಕಾ ಗಾಂಧಿ ಪತಿ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ ದಾಕಲಿಸಿದ ಕೆಲವು ಪ್ರಕರಣಗಳಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics