ದೇಶ

ವಾಜಪೇಯಿ ಅಸ್ತಿ ಕಳಸ ಯಾತ್ರೆ ಆರಂಭ :ಹರಿದ್ವಾರ ಸೇರಿ ದೇಶದ ಪ್ರಮುಖ ನದಿಗಳಲ್ಲಿ ವಿಸರ್ಜನೆ

Nagaraja AB
ನವದೆಹಲಿ: ಇತ್ತೀಚಿಗೆ ನಿಧನರಾದ ಮಾಜಿ ಪ್ರಧಾನಿ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಅಸ್ತಿ ಕಳಸ ಯಾತ್ರೆ ಆರಂಭಗೊಂಡಿದೆ.
ಇಂದು ಬೆಳಗ್ಗೆ ರಾಷ್ಟ್ರೀಯ ಸ್ಮೃತಿ ಸ್ಥಳದಿಂದ ವಾಜಪೇಯಿ ಅವರ ದತ್ತು ಪುತ್ರಿ ನಮಿತಾ ಭಟ್ಟಾಚಾರ್ಯ ಹಾಗೂ ದತ್ತು ಮೊಮ್ಮಗಳು ನಿಹಾರಿಕಾ ಅಸ್ತಿ ಸಂಗ್ರಹಿಸಿಕೊಂಡು ಪ್ರೇಮ್ ಆಶ್ರಮಕ್ಕೆ ತೆಗೆದುಕೊಂಡು ಹೋಗಲಾಯಿತು .ನಂತರ ಪುಣ್ಯಕ್ಷೇತ್ರ ಹರಿದ್ವಾರದಲ್ಲಿನ ಗಂಗಾ ನದಿಯಲ್ಲಿ   ವಿಸರ್ಜನೆ ಮಾಡಲಾಯಿತು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕೇಂದ್ರ  ಗೃಹ ಸಚಿವ ರಾಜನಾಥ್ ಸಿಂಗ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉತ್ತರ ಖಂಡ್ ಮುಖ್ಯಮಂತ್ರಿ ಟಿ.ಎಸ್. ರಾವತ್ ಸೇರಿದಂತೆ ಅನೇಕ ಗಣ್ಯರು ಈ ಸಂದರ್ಭದಲ್ಲಿ  ಉಪಸ್ಥಿತರಿದ್ದರು.
ವಾಜಪೇಯಿ ಅವರ ಅಸ್ತಿಯನ್ನು ದೇಶದ ಪ್ರಮುಖ ನದಿಗಳಲ್ಲಿ ವಿಸರ್ಜನೆ ಮಾಡಲಾಗುತ್ತದೆ. ನಂತರ ರಾಜ್ಯ ರಾಜಧಾನಿ ಹಾಗೂ ಜಿಲ್ಲಾಕೇಂದ್ರಗಳಿಗೆ ಕೊಂಡಯ್ಯಲಾಗುತ್ತದೆ. ರಾಜ್ಯ ರಾಜಧಾನಿ, ಜಿಲ್ಲಾ ಕೇಂದ್ರ ಹಾಗೂ ಪಂಚಾಯಿತಿ ಮಟ್ಟದಲ್ಲಿ ಪ್ರಾರ್ಥನಾ ಸಭೆ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಮುಖಂಡ ಭೂಪೇಂದ್ರ ಯಾದವ್ ತಿಳಿಸಿದ್ದಾರೆ.
SCROLL FOR NEXT