ಸಂಗ್ರಹ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ಗಡಿ ನಸುಳುತ್ತಿದ್ದ 3 ಉಗ್ರರನ್ನು ಹೊಡೆದುರುಳಿಸಿದ ಸೇನೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ತಂಗ್ಧಾರ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನಾಪಡೆ ಭಾನುವಾರ ಹೊಡೆದುರುಳಿಸಿದೆ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ತಂಗ್ಧಾರ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನಾಪಡೆ ಭಾನುವಾರ ಹೊಡೆದುರುಳಿಸಿದೆ. 
ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ತಂಗ್ಧಾರ್ ಸೆಕ್ಟರ್ ಬಳಿ ಉಗ್ರರು ಗಡಿ ನುಸುಳಲು ಯತ್ನ ನಡೆಸುತ್ತಿದ್ದರು. ಈ ವೇಳೆ ಗಸ್ತು ತಿರುಗುತ್ತಿದ್ದ ಭಾರತೀಯ ಸೇನಾಪಡೆ ಉಗ್ರರನ್ನು ಹತ್ಯೆ ಮಾಡಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. 
ಸ್ಥಳದಲ್ಲಿ ಮತ್ತಷ್ಟು ಉಗ್ರರಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ. 
ಉಗ್ರರನ್ನು ಹತ್ಯೆ ಮಾಡಿರುವ ಕುರಿತಂತೆ ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ಎಸ್.ಪಿ.ವೈದ್ ಅವರು ದೃಢಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಅವರು, ಕುಪ್ವಾರ ಜಿಲ್ಲೆಯ ತಂಗ್ಧಾರ್ ಸೆಕ್ಟರ್ ಬಳಿ ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಮೂವರು ಉಗ್ರರನ್ನು ಸೇನೆ ಹತ್ಯೆ ಮಾಡಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!