ಸಂಗ್ರಹ ಚಿತ್ರ 
ದೇಶ

ವಿಚಾರವಾದಿ ನರೇಂದ್ರ ಧಾಬೋಲ್ಕರ್‌ ಹತ್ಯೆ: ಶಂಕಿತ ಪ್ರಮುಖ ಆರೋಪಿ ಬಂಧನ

ವಿಚಾರವಾದಿ, ಪ್ರಗತಿಪರ ಚಿಂತಕ ಮಹಾರಾಷ್ಟ್ರದ ನರೇಂದ್ರ ಧಾಬೋಲ್ಕರ್‌ ಅವರ ಹತ್ಯೆ ಪ್ರಕರಣ ಸಂಬಂಧ ಶಂಕಿತ ಪ್ರಮುಖ ಆರೋಪಿಯನ್ನು ಸಿಬಿಐ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಮುಂಬೈ: ವಿಚಾರವಾದಿ, ಪ್ರಗತಿಪರ ಚಿಂತಕ ಮಹಾರಾಷ್ಟ್ರದ ನರೇಂದ್ರ ಧಾಬೋಲ್ಕರ್‌ ಅವರ ಹತ್ಯೆ ಪ್ರಕರಣ ಸಂಬಂಧ ಶಂಕಿತ ಪ್ರಮುಖ ಆರೋಪಿಯನ್ನು ಸಿಬಿಐ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಬಂಧಿತ ಶಂಕಿತನನ್ನು ಸಚಿನ್‌ ಪ್ರಕಾಶರಾವ್‌ ಅಂದುರೆ ಎಂದು ಗುರುತಿಸಲಾಾಗಿದ್ದು, ಶನಿವಾರ ಔರಂಗಾಬಾದ್‌ನಲ್ಲಿ ಸಿಬಿಐ ಅಧಿಕಾರಿಗಳು  ಬಂಧಿಸಿದ್ದಾರೆ.  ಧಾಭೋಲ್ಕರ್‌ ಹತ್ಯೆಯಾದ ಐದು ವರ್ಷ ಬಳಿಕ ಈತ ಸರೆ ಸಿಕ್ಕಿದ್ದು, ಪ್ರಕರಣದ ತನಿಖೆ ಚುರುಕು ಪಡೆದುಕೊಂಡಂತಾಗಿದೆ.
ಪುಣೆಯಲ್ಲಿ 2013ರ ಆಗಸ್ಟ್‌ 20ರಂದು ನಡೆದ ಪ್ರಕರಣದಲ್ಲಿ ಧಾಬೋಲ್ಕರ್‌ ಮೇಲೆ ಗುಂಡಿನ ದಾಳಿ ನಡೆಸಿ ಭೀಕರವಾಗಿ ಕೊಲೆಗೈಯಲಾಗಿತ್ತು. ದುಷ್ಕರ್ಮಿಗಳ ಪೈಕಿ ಅಂದುರೆ ಪ್ರಧಾನ ಶೂಟರ್‌ ಆಗಿರುವ ಸಾಧ್ಯತೆಗಳಿದ್ದು, ಆತನನ್ನು ತೀವ್ರ ವಿಚಾರಣೆಗೆ ಒಳ ಪಡಿಸಲಾಗಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ.
ವಿಚಾರವಾದಿ ಧಾಬೋಲ್ಕರ್‌ ಹತ್ಯೆಯ ಬಳಿಕ 2015ರ ಫೆಬ್ರವರಿ 16ರಂದು ಕೊಲ್ಹಾಪುರದಲ್ಲಿ ಮತ್ತೊಬ್ಬ ಚಿಂತಕ ಗೋವಿಂದ ಪನ್ಸಾರೆ ಅವರ ಹತ್ಯೆ ಮಾಡಲಾಗಿತ್ತು. ಈ ಎರಡೂ ಹತ್ಯೆ ಪ್ರಕರಣಗಳ ತನಿಖೆ ವಿಳಂಬ ಗತಿಯಲ್ಲಿ ಸಾಗುತ್ತಿರುವ ಬಗ್ಗೆ ಬಾಂಬೆ ಹೈಕೋರ್ಟ್‌ ಇತ್ತೀಚೆಗಷ್ಟೇ ಮಹಾರಾಷ್ಟ್ರ ಹಾಗೂ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಇದರ ಬೆನ್ನಲ್ಲೇ ಅಂದುರೆಯ ಬಂಧನವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ