ಕೇರಳಕ್ಕೆ ಸಹಾಯ ಮಾಡಲು ಅಂತಾರಾಷ್ಟ್ರೀಯ ಸಮುದಾಯಕ್ಕೆ ಪೋಪ್ ಕರೆ
ಜಲಪ್ರವಾಹಕ್ಕೆ ತುತ್ತಾಗಿರುವ ಕೇರಳ ರಾಜ್ಯದ ಜನತೆಗೆ ಸಹಾಯ ಮಾಡುವಂತೆ ಅಂತಾರಾಷ್ಟ್ರೀಯ ಸಮುದಾಯಕ್ಕೆ ಪೋಪ್ ಫ್ರಾನ್ಸಿಸ್ ಕರೆ ನೀಡಿದ್ದಾರೆ.
ವ್ಯಾಟಿಕನ್: ಜಲಪ್ರವಾಹಕ್ಕೆ ತುತ್ತಾಗಿರುವ ಕೇರಳ ರಾಜ್ಯದ ಜನತೆಗೆ ಸಹಾಯ ಮಾಡುವಂತೆ ಅಂತಾರಾಷ್ಟ್ರೀಯ ಸಮುದಾಯಕ್ಕೆ ಪೋಪ್ ಫ್ರಾನ್ಸಿಸ್ ಕರೆ ನೀಡಿದ್ದಾರೆ.
ವ್ಯಾಟಿಕನ್ ನ್ಯೂಸ್ ವರದಿಯ ಪ್ರಕಾರ ಪೋಪ್ ಫ್ರಾನ್ಸಿಸ್ ಕೇರಳದ ಸಂತ್ರಸ್ತರಿಗಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಕೇರಳದಲ್ಲಿನ ಭೀಕರ ಮಳೆಯಿಂದಾಗಿ ಅಲ್ಲಿನ ಜನಜೀವನ ಅಸ್ತವ್ಯಸ್ಥಗೊಂಡಿದೆ. ಅಲ್ಲಿನ ಜನತೆಗೆ ಸಹಾಯ ಮಾಡಲು ಅಂತಾರಾಷ್ಟ್ರೀಯ ಸಮುದಾಯ ಮುಂದಾಗಬೇಕೆಂದು ಪೋಪ್ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.