ದೇಶ

ಮೀಸಲಾತಿ ಪ್ರತಿಭಟನೆ: ಹಾರ್ದಿಕ್ ಪಟೇಲ್, ಬೆಂಬಲಿಗರ ಬಂಧನ

Lingaraj Badiger
ಅಹಮದಾಬಾದ್: ಅಹಮದಾಬಾದ್ ನ ನಿಕೋಲ್ ಪ್ರದೇಶದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲು ಮುಂದಾಗಿದ್ದ ಪಾಟೀದಾರ್ ಅನಾಮತ್ ಆಂದೋಲನ್ ಸಮಿತಿ ಸಂಚಾಲಕ ಹಾರ್ದಿಕ್ ಪಟೇಲ್ ಹಾಗೂ ಅವರ ಬೆಂಬಲಿಗರನ್ನು ಬಂಧಿಸಲಾಗಿದೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ.
ಪಾಟೀದಾರ್ ಯುವಕರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಆಗಸ್ಟ್ 25ರಂದು ಬೃಹತ್ ಪ್ರತಿಭಟನೆಗೆ ಮೈದಾನ ನೀಡಬೇಕು ಎಂದು ಒತ್ತಾಯಿಸಿ ಇಂದು ಪಾರ್ಕಿಂಗ್ ಸ್ಥಳದಲ್ಲೇ ಸಾಂಕೇತಿಕ ಉಪವಾಸ ನಡೆಸುತ್ತಿದ್ದರು. 
ಸ್ಥಳಕ್ಕೆ ಆಗಮಿಸಿದ ಕ್ರೈಂ ಬ್ರಾಂಚ್ ಪೊಲೀಸರು ಹಾರ್ದಿಕ್ ಪಟೇಲ್ ಹಾಗೂ ಅವರ 30 ಮಂದಿ ಬೆಂಬಲಿಗರನ್ನು ವಶಕ್ಕೆ ಪಡೆದಿದ್ದಾರೆ ಎಂದು ಕ್ರೈಂ ಬ್ರಾಂಚ್ ಡಿಸಿಪಿ ದೀಪನ್ ಭದ್ರನ್ ಅವರು ತಿಳಿಸಿದ್ದಾರೆ.
ಕಾನೂನು ಬಾಹಿರವಾಗಿ ಗುಂಪು ಸೇರಿದೆ ಆರೋಪದ ಮೇಲೆ ಹಾರ್ದಿಕ್ ಪಟೇಲ್ ಹಾಗೂ ಅವರ ಬೆಂಬಲಗರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.
ಮೀಸಲಾತಿಗೆ ಒತ್ತಾಯಿಸಿ ಆಗಸ್ಟ್ 25ರಿಂದ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಹಾರ್ದಿಕ್ ಪಟೇಲ್ ಘೋಷಿಸಿದ್ದರು.
SCROLL FOR NEXT