ಪ್ರಮುಖ ಆರೋಪಿ 
ದೇಶ

ಮುಜಾಫರ್ ಪುರ್ ಪ್ರಕರಣ : ಮಂಜು ವರ್ಮ, ಆಕೆಯ ಪತಿ ವಿರುದ್ಧ ಎಫ್ ಐಆರ್ ದಾಖಲು

ಮುಜಾಫರ್ ಪುರ್ ವಸತಿ ನಿಲಯಗಳಲ್ಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಸಮಾಜ ಕಲ್ಯಾಣ ಇಲಾಖೆ ಸಚಿವೆ ಮಂಜು ವರ್ಮ ಹಾಗೂ ಆಕೆಯ ಪತಿ ಚಂದ್ರಕಾಂತ್ ವರ್ಮಾ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಎಫ್ ಐ ಆರ್ ದಾಖಲಿಸಲಾಗಿದೆ.

ಪಾಟ್ನಾ: ಮುಜಾಫರ್ ಪುರ್  ವಸತಿ ನಿಲಯಗಳಲ್ಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಸಮಾಜ ಕಲ್ಯಾಣ ಇಲಾಖೆ ಸಚಿವೆ ಮಂಜು  ವರ್ಮ  ಹಾಗೂ ಆಕೆಯ ಪತಿ ಚಂದ್ರಕಾಂತ್ ವರ್ಮಾ  ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ  ಎಫ್ ಐ ಆರ್ ದಾಖಲಿಸಲಾಗಿದೆ.

ಮಂಜು ಅವರ ಪಾಟ್ನಾದಲ್ಲಿನ ನಿವಾಸ ಸೇರಿದಂತೆ 12 ಕಡೆಗಳಲ್ಲಿ ಈ ಹಿಂದೆ ದಾಳಿ ನಡೆಸಿದ ಸಿಬಿಐ 50 ಕ್ಯಾಟ್ರಿಡ್ಜ್ ಗಳನ್ನು ವಶಪಡಿಸಿಕೊಂಡಿತ್ತು.

ಮುಜಾಫರ್ ಪುರ್ ವಸತಿ ನಿಲಯದ ಪ್ರಮುಖ ಆರೋಪಿ ಬ್ರಜೇಶ್ ಠಾಕೂರ್  ಅವರೊಂದಿಗೆ ಸಂರ್ಪಕ ಹೊಂದಿದ್ದ ಆರೋಪದ ಮೇರೆಗೆ ಮಾಜಿ ಬಿಹಾರ ಸಮಾಜ ಕಲ್ಯಾಣ ಸಚಿವ ದಾಮೊದರ್ ರಾವತ್ ಅವರನ್ನು ಸಿಬಿಐ ವಿಚಾರಣೆ ನಡೆಸಿದೆ.

ಈ ಪ್ರಕರಣದಲ್ಲಿ  ಮಂಜು ವರ್ಮಾ ಅವರ ಪತಿ ಬಗ್ಗೆ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ  ಆಗಸ್ಟ್ 9 ರಂದು ಮಂಜು ವರ್ಮಾ ಅವರಿಂದ ಮುಖ್ಯಮಂತ್ರಿ ನಿತಿಶ್ ಕುಮಾರ್ ರಾಜೀನಾಮೆ ಪಡೆದಿದ್ದರು.

ಮಂಜು ವರ್ಮಾ ಅವರ ಪತಿ ಚಂದ್ರಕಾಂತ್  ಆಗ್ಗಾಗೇ ಬಾಲಕಿಯರ ವಸತಿ ನಿಲಯಕ್ಕೆ ಹೋಗಿ ಬರುತ್ತಾರೆ ಎಂಬ ಆರೋಪ ಕೇಳಿಬಂದಿತ್ತು. ಆದಾಗ್ಯೂ,  ದಂಪತಿ ಆರೋಪವನ್ನು ತಳ್ಳಿಹಾಕಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Parliament Monsoon Session: ರಾಹುಲ್ ವಿರುದ್ಧ ಆಕ್ರೋಶ; ಸಂಸತ್ ಆವರಣದಲ್ಲಿ NDA ಸಂಸದರ ಬೃಹತ್ ಪ್ರತಿಭಟನಾ ಮೆರವಣಿಗೆ, ಲೋಕಸಭೆ ಕಲಾಪ ಮಧ್ಯಾಹ್ನ 2ಕ್ಕೆ ಮುಂದೂಡಿಕೆ..!

ಪಶ್ಚಿಮ ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; ಮೃತರ ಸಂಖ್ಯೆ 111ಕ್ಕೆ ಏರಿಕೆ, ಹಲವರಿಗೆ ಗಾಯ

ಬಿಲಿಯನೇರ್ Gautam Adaniಗೆ ಬಿಗ್ ರಿಲೀಫ್: ಎಲ್ಲಾ ಕ್ರಿಮಿನಲ್ ಪ್ರಕರಣಗಳ ವಜಾಗೊಳಿಸಿದ ಅಮೆರಿಕಾ ನ್ಯಾಯಾಲಯ..!

ಬಿಡದಿ ಹೋರಾಟ ಅರ್ಧಕ್ಕೆ ಸ್ಥಗಿತ; ‘ರೈತರ ನ್ಯಾಯಕ್ಕಾಗಿ ತಾರ್ಕಿಕ ಅಂತ್ಯದವರೆಗೆ ಹೋರಾಟ’ ಎಂದ ದೇವೇಗೌಡ, ಆ.18ಕ್ಕೆ ವಿಧಾನಸೌಧ ಮುತ್ತಿಗೆ..!

ಬರ ಪರಿಹಾರಕ್ಕೆ ಕೇಂದ್ರದಿಂದ ಇನ್ನೂ ಉತ್ತರ ಬಂದಿಲ್ಲ; ಅಗತ್ಯವಿದ್ದರೆ ನ್ಯಾಯಾಲಯದ ಮೊರೆ: DCM ಡಾ. ಪರಮೇಶ್ವರ್‌