ಸಾಂದರ್ಭಿಕ 
ದೇಶ

ಕಾಶ್ಮೀರ: ಚೆನಾಬ್ ನದಿಗೆ ಉರುಳಿದ ವಾಹನ, 13 ಮಂದಿ ಸಾವು

ಜಮ್ಮು ಮತ್ತು ಕಾಶ್ಮೀರದ ಕಿಶ್ತವಾರ್ ಜಿಲ್ಲೆಯಲ್ಲಿ ಯಾತ್ರಿಗಳನ್ನು ಕರೆದೊಯ್ಯುತ್ತಿದ್ದ ವಾಹನವೊಂದು ಸ್ಕಿಡ್ ಆಗಿ ಚೆನಾಬ್...

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶ್ತವಾರ್ ಜಿಲ್ಲೆಯಲ್ಲಿ ಯಾತ್ರಿಗಳನ್ನು ಕರೆದೊಯ್ಯುತ್ತಿದ್ದ ವಾಹನವೊಂದು ಸ್ಕಿಡ್ ಆಗಿ ಚೆನಾಬ್ ನದಿಗೆ ಉರುಳಿ ಬಿದ್ದಿದ್ದು, ಭೀಕರ ಅಪಘಾತದಲ್ಲಿ ಐದು ವರ್ಷದ ಬಾಲಕಿ ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ.
ಇಂದು ಬೆಳಗ್ಗೆ 7.30ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಮಠ ಮಚೈಲ್ ದೇವಾಲಯಕ್ಕೆ ತೆರಳುತ್ತಿದ್ದ ವೇಳೆ ವಾಹನ ಚೆನಾಬ್ ನದಿಗೆ ಉರುಳಿ ಬಿದ್ದಿದೆ.
ಕಿಸ್ತ್ವಾರ ಜಿಲ್ಲಾ ಕೇಂದ್ರದಿಂದ 28 ಕೀ.ಮಿ ದೂರದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಗುಪ್ತಾ ಅವರು ತಿಳಿಸಿದ್ದಾರೆ.
ಅಪಘಾತದಲ್ಲಿ ವಾಹನದ ಚಾಲಕ ಹಾಗೂ ನಿರ್ವಾಹಕ ಸೇರಿದಂತೆ 13 ಮಂದಿ ಮೃತಪಟ್ಟಿದ್ದು, ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿ 11 ಮೃತದೇಹಗಳನ್ನೂ ಕೂಡ ನದಿಯಿಂದ ಹೊರತೆಗೆಯಲಾಗಿದೆ ಎಂದು ಅವರು ಹೇಳಿದ್ದಾರೆ.
ಸೋಮವಾರವೂ ಇಲ್ಲಿ ಅಪಘಾತ ಸಂಭವಿಸಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ