ನವದೆಹಲಿ: 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಆಮ್ ಆದ್ಮಿ ಪಕ್ಷ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ಇರಲಿದೆ, ಕಾಂಗ್ರೆಸ್ ಮುನ್ನೆಲೆಯಲ್ಲಿ ಇರುವುದಿಲ್ಲ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
"ದೆಹಲಿಯಲ್ಲಿ 2019 ಕ್ಕೆ ನೇರ ಹಣಾಹಣಿ ಏರ್ಪಡುವುದು ಬಿಜೆಪಿ-ಆಪ್ ನಡುವೆ, ಶೇ.9 ರಷ್ಟು ಮತಗಳನ್ನು ಹೊಂದಿರುವ ಕಾಂಗ್ರೆಸ್ ಮುನ್ನೆಲೆಯಲ್ಲಿ ಇರುವುದಿಲ್ಲ" ಎಂದು ಟ್ವೀಟ್ ಮಾಡಿದ್ದಾರೆ. ಆಮ್ ಆದ್ಮಿ ಪಕ್ಷ ಮಾತ್ರ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದೆ ಎಂದು ಜನತೆ ನಂಬಿದ್ದಾರೆ. ಬಿಜೆಪಿಯ ಸಂಸದರು, ಕಾಂಗ್ರೆಸ್ ಸಂಸದರು ದೆಹಲಿ ಜನರ ಬಗ್ಗೆ ಯೋಚಿಸುವುದಿಲ್ಲ. ಈ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳಿಗಿಂತ ಹೆಚ್ಚು ದೆಹಲಿಯ ಜನತೆ ಆಪ್ ಪಕ್ಷದ ಮೇಲೆ ಹೆಚ್ಚು ವಿಶ್ವಾಸ ಹೊಂದಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಬಿಜೆಪಿ ವಿರುದ್ಧ ಜನತೆಗೆ ಅಸಮಾಧಾನವಿದೆ ಇದು 2019 ರ ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆ ಎಂದು ಕೇಜ್ರಿವಾಲ್ ಭವಿಷ್ಯ ನುಡಿದಿದ್ದಾರೆ.