ಕುಪ್ವಾರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ತಂಗ್ಧಾರ್ ಸೆಕ್ಟರ್ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಈ ವೇಳೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಭಾರತೀಯ ಯೋಧನಿಗೆ ಗಾಯವಾಗಿರುವ ಘಟನೆ ಮಂಗಳವಾರ ನಡೆದಿದೆ.
ಕುಪ್ವಾಲ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಈ ವೇಳೆ ಯೋಧರೊಬ್ಬರಿಗೆ ಗಾಯವಾಗಿದೆ. ಗಾಯಗೊಂಡ ಯೋಧನಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪಾಕಿಸ್ತಾದ ಅಪ್ರಚೋದಿತ ಗುಂಡಿನ ದಾಳಿಗೆ ಭಾರತ ಕೂಡ ದಿಟ್ಟ ಉತ್ತರವನ್ನು ನೀಡುತ್ತಿದ್ದು, ಪ್ರಸ್ತುತ ಗಡಿಯಲ್ಲಿ ಗುಂಡಿನ ಚಕಮಕಿ ಮುಂದುವರೆದಿದೆ ಎಂದು ತಿಳಿದುಬಂದಿದೆ.