ದೇಶ

ಭಾರತ-ಚೀನಾ ಗಡಿ ಪ್ರದೇಶದಲ್ಲಿನ ಶಾಂತಿ ಪ್ರಬುದ್ಧತೆಯ ಸೂಚಕ: ಪ್ರಧಾನಿ ಮೋದಿ

Srinivas Rao BV
ನವದೆಹಲಿ: ಡೋಕ್ಲಾಮ್ ವಿವಾದದ ನಂತರ ಭಾರತಕ್ಕೆ ಮೊದಲ ಬಾರಿ ಭೇಟಿ ನೀಡಿರುವ ಚೀನಾದ ರಕ್ಷಣಾ ಸಚಿವ ವೈ ಫೆಂಗ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಆ.21 ರಂದು ಭೇಟಿ ಮಾಡಿ ಮಹತ್ವದ ವಿಷಯಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. 
ಇದೇ ವೇಳೆ ಗಡಿ ವಿಷಯದ ಬಗ್ಗೆಯೂ ಪ್ರಧಾನಿ ನರೇಂದ್ರ ಮೋದಿ ಚೀನಾ ರಕ್ಷಣಾ ಸಚಿವರೊಂದಿಗೆ ಮಾತುಕತೆ ನಡೆಸಿದ್ದು, ಭಾರತ-ಚೀನಾ ಗಡಿ ಪ್ರದೇಶದಲ್ಲಿನ ಶಾಂತಿ ಪ್ರಬುದ್ಧತೆಯ ಸೂಚಕವಾಗಿದೆ ಎಂದು ಹೇಳಿದ್ದಾರೆ.  ಭಾರತ-ಚೀನಾ ತಮ್ಮ ನಡುವಿನ ಭಿನ್ನಾಭಿಪ್ರಾಯಗಳನ್ನು ಪ್ರಬುದ್ಧತೆಯಿಂದ ನಿರ್ವಹಿಸುತ್ತಿದ್ದು, ವಿವಾದ ಆಗದಂತೆ ಎಚ್ಚರಿಕೆ ವಹಿಸುತ್ತಿದೆ ಎಂದಿರುವ ಪ್ರಧಾನಿ ಮೋದಿ ಭಾರತ- ಚೀನಾ ನಡುವಿನ ಉನ್ನತ ಮಟ್ಟದ ಸಂಪರ್ಕ ಉತ್ತಮಗೊಳ್ಳುತ್ತಿರುವುದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 
ಚೀನಾ-ಭಾರತದ ಸಂಬಂಧವನ್ನು ವಿಶ್ವದ ಸ್ಥಿರತೆಯ ಅಂಶವೆಂದು ಪ್ರಧಾನಿ ನರೇಂದ್ರ ಮೋದಿ ಇದೇ ವೇಳೆ ಹೇಳಿದ್ದು, ಕ್ಸೀ ಜಿನ್ ಪಿಂಗ್ ಅವರೊಂದಿಗೆ ಮಾತುಕತೆಯನ್ನು ನೆನಪಿಸಿಕೊಂಡಿದ್ದಾರೆ. 
SCROLL FOR NEXT