ನವಜೋತ್ ಸಿಂಗ್ ಸಿಧು 
ದೇಶ

ಪಾಕ್ ಗೆ ಭೇಟಿ ನೀಡುವ ಮುನ್ನ ಕೇಂದ್ರದ ಅನುಮತಿ ಪಡೆದಿದ್ದೇನೆ: ಸಿಧು

ಪಾಕಿಸ್ತಾನದ ನೂತನ ಪ್ರಧಾನಿ ಇಮ್ರಾನ್ ಖಾನ್ ಅವರ ಪ್ರಮಾಣವಚನ ಸಮಾಂಭರದಲ್ಲಿ ಭಾಗವಹಿಸಿದ ತಮ್ಮ....

ಚಂಡಿಗಢ: ಪಾಕಿಸ್ತಾನದ ನೂತನ ಪ್ರಧಾನಿ ಇಮ್ರಾನ್ ಖಾನ್ ಅವರ ಪ್ರಮಾಣವಚನ ಸಮಾಂಭರದಲ್ಲಿ ಭಾಗವಹಿಸಿದ ತಮ್ಮ ನಡೆಯನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ನಾಯಕ, ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಅವರು, ಪಾಕ್ ಗೆ ತೆರಳುವ ಮುನ್ನ ಕೇಂದ್ರ ಸರ್ಕಾರದ ಅನುಮತಿ ಪಡೆದಿರುವುದಾಗಿ ಮಂಗಳವಾರ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಧು, ನೆರೆಯ ಪಾಕಿಸ್ತಾನಕ್ಕೆ ಭೇಟಿ ನೀಡಲು ನಿಮಗೆ ಅನುಮತಿ ನೀಡಲಾಗಿದೆ ಎಂದು ಸ್ವತಃ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ನನಗೆ ಕರೆ ಮಾಡಿ ಹೇಳಿದ್ದರು ಎಂದರು.
ಇಮ್ರಾನ್ ಖಾನ್ ಅವರು ನನಗೆ ಆಹ್ವಾನ ಕಳುಹಿಸಿದ್ದರು. ಹೀಗಾಗಿ ನಾನು ಪಾಕ್ ಗೆ ತೆರಳಲು ಕೇಂದ್ರ ಸರ್ಕಾರದ ಅನುಮತಿ ಕೋರಿದ್ದೆ. ಪಾಕಿಸ್ತಾನ ಸರ್ಕಾರ ವೀಸಾ ನೀಡಿದ ಎರಡು ದಿನಗಳ ನಂತರ ಸುಷ್ಮಾ ಸ್ವರಾಜ್ ಅವರು ಕರೆ ಮಾಡಿ, ನಿಮಗೆ ಅನುಮತಿ ನೀಡಲಾಗಿದೆ ಎಂದು ಹೇಳಿದ್ದರು ಎಂದು ಸಿಧು ತಿಳಿಸಿದ್ದಾರೆ.
ಪಾಕಿಸ್ತಾನ ಸೇನಾ ಮುಖ್ಯಸ್ಥರು ನನ್ನ ತಬ್ಬಿಕೊಂಡಿದ್ದಕ್ಕೆ ಸುಖಾಸುಮ್ಮನೆ ವಿವಾಗದ ಎಬ್ಬಿಸಲಾಗುತ್ತಿದೆ,. ನಾನು ಏನು ಮಾಡಬೇಕು ಎಂದು ಯಾರು ನನಗೆ ಹೇಳುವ ಅಗತ್ಯವಿಲ್ಲ, ನನ್ನ ಆತ್ಮ ಸಾಕ್ಷಿಯ ಪ್ರಕಾರ ನಾನು ನಡೆದುಕೊಳ್ಳುತ್ತೇನೆ ಎಂದು ಕಿಡಿಕಾರಿದ್ದಾರೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಕೂಡ ಲಾಹೋರ್ ಗೆ ಭೇಟಿ ನೀಡಿದ್ದರು. ಶಾಂತಿ ಸ್ಥಾಪನೆ ಮಾಡಲು ಈ ಹಿಂದೆಯೂ ಪ್ರಯತ್ನಗಳು ನಡೆದಿವೆ, ಪ್ರಧಾನಿ ಮೋದಿ ತಮ್ಮ ಪ್ರಮಾಣ ವಚನ ಸಮಾರಂಭಕ್ಕೆ ನವಾಜ್ ಷರೀಫ್  ಅವರನ್ನು ಆಹ್ವಾನಿಸಿದ್ದರು, ಜೊತೆಗೆ ಮೋದಿ ಕೂಡ ಲಾಹೋರ್ ಗೆ ಬೇಟಿ ನೀಡಿದ್ದರು. 
ಗಡಿಯಲ್ಲಿ ಶಾಂತಿ ಮತ್ತು ಸ್ಥಿರತೆ ಕಾಪಾಡಿಕೊಳ್ಳಲು ಪ್ರಯತ್ನ ಮಾಡಲಾಗುತ್ತಿದೆ, ಇಮ್ರಾನ್ ಖಾನ್ ನನ್ನ ,ಸ್ನೇಹಿತರು, ತಮ್ಮ ಭಾಷಣದಲ್ಲಿ ನೆರೆಯ ದೇಶದೊಂದಿಗೆ ಶಾಂತಿ ಕಾಪಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡುವ ಭರವಸೆ ನೀಡಿದ್ದಾರೆ ಎಂದು ಸಿಧು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!