ಕೊಲ್ಕತ್ತಾ :ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಪ್ರಾಣಿಗಳ ಹತ್ಯೆ ನಡೆಯಲ್ಲ ಎಂಬ ಬಗ್ಗೆ ಖಚಿತಪಡಿಸಿಕೊಳ್ಳುವಂತೆ ಕೇರಳ ಹೈಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಮುಂದಿನ ವರ್ಷದ ಇದ್- ಉಜ್- ಜೊಹಾ ಆಚರಣೆ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಪ್ರಾಣಿ ಹತ್ಯೆ ನಿಯಂತ್ರಣ ಕಾಯ್ದೆ 1950ರ ನಿಬಂಧನೆಗಳ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶಿಸಿದೆ.
ಈ ಬಾರಿ 1950 ರ ಕಾಯ್ದೆಯಲ್ಲಿನ ನಿಬಂಧನೆಗಳನ್ನು ಸರ್ಕಾರ ಜಾರಿಗೆ ತರಲಿದೆ ಎಂಬ ನಿರೀಕ್ಷೆ ಎಲ್ಲರದಾಗಿದೆ ಎಂದು ನ್ಯಾಯಾಧೀಶ ಎ. ಬ್ಯಾನರ್ಜಿ ಹೇಳಿದರು.