ಮಿಡ್ನಾಪುರ : ಪಶ್ಚಿಮ ಬಂಗಾಳ ರಾಜ್ಯದ ಮಿಡ್ನಾಪುರ ಜಿಲ್ಲೆಯ ಮ್ಯಾಕ್ರಾಮ್ ಪುರ ದಲ್ಲಿನ ತೃಣಮೂಲಕ ಕಾಂಗ್ರೆಸ್ ಕಚೇರಿ ಬಳಿ ಇಂದು ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದು, ಐವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.
ಬೆಳಗ್ಗೆ 10 ಗಂಟೆ ಸುಮಾರಿನಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಮೃತಪಟ್ಟ ಹಾಗೂ ಗಾಯಾಳುಗಳ ಪರಿಚಯ ತಿಳಿದುಬಂದಿಲ್ಲ. ಸ್ಟೋಟದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಜಮಾಯಿಸಿದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಒದಗಿಸಿದ್ದಾರೆ.