ಕೇರಳ ಪ್ರವಾಹ: ನೆರವನ್ನು ಇನ್ನೂ ಅಂತಿಮಗೊಳಿಸಿಲ್ಲ- ಯುಎಇ ಸ್ಪಷ್ಟನೆ 
ದೇಶ

ಕೇರಳ ಪ್ರವಾಹ ಸಂತ್ರಸ್ತರಿಗೆ ನೆರವನ್ನು ಅಧಿಕೃತವಾಗಿ ಪ್ರಕಟಿಸಿಲ್ಲ- ಯುಎಇ ಸ್ಪಷ್ಟನೆ

ಕೇರಳ ಪ್ರವಾಹ ಸಂತ್ರಸ್ತರಿಗೆ ಯುಎಇ ನೆರವು ನೀಡುವುದರ ಬಗ್ಗೆ ಸಾಕಷ್ಟು ಗೊಂದಲಗಳು ಉಂಟಾಗಿತ್ತು. ಈಗ ಸ್ವತಃ ಯುಎಇ ರಾಯಭಾರಿ ಕಚೇರಿ ಅಧಿಕಾರಿಗಳು ಎಲ್ಲಾ ಗೊಂದಲಗಳಿಗೂ ತೆರೆ ಎಳೆದಿದ್ದಾರೆ.

ನವದೆಹಲಿ: ಕೇರಳ ಪ್ರವಾಹ ಸಂತ್ರಸ್ತರಿಗೆ ಯುಎಇ ನೆರವು ನೀಡುವುದರ ಬಗ್ಗೆ ಸಾಕಷ್ಟು ಗೊಂದಲಗಳು ಉಂಟಾಗಿತ್ತು. ಈಗ ಸ್ವತಃ ಯುಎಇ ರಾಯಭಾರಿ ಕಚೇರಿ ಅಧಿಕಾರಿಗಳು ಎಲ್ಲಾ ಗೊಂದಲಗಳಿಗೂ ತೆರೆ ಎಳೆದಿದ್ದಾರೆ. 
ಸಂತ್ರಸ್ತರಿಗೆ ನೆರವು ನೀಡುವುದರ ಸಂಬಂಧ ಪ್ರತಿಕ್ರಿಯೆ ನೀಡಿರುವ ದೆಹಲಿಯಲ್ಲಿನ ಯುಎಇ ರಾಯಭಾರಿ ಅಧಿಕಾರಿಕಾರಿಗಳು,  ಕೇರಳ ಪ್ರವಾಹ ಪರಿಹಾರಕ್ಕಾಗಿ ಯಾವುದೇ ರೀತಿಯ ನೆರವನ್ನೂ ಅಂತಿಮಗೊಳಿಸಿಲ್ಲ ಎಂದು ಮಾಹಿತಿ ನೀಡಿದ್ದಾರೆ. 
ಯುಎಇ ಅಧಿಕೃತವಾಗಿ ಕೇರಳಕ್ಕೆ ಆರ್ಥಿಕ ನೆರವನ್ನು ಘೋಷಿಸಿಲ್ಲ. ನೆರವಿಗೆ ಸಂಬಂಧಿಸಿದಂತೆ ಭಾರತ ಸರ್ಕಾರಕ್ಕೆ ನಾವು ಯಾವುದೇ ರೀತಿಯ ಮಾಹಿತಿಯನ್ನೂ ನೀಡಿಲ್ಲ.  ಆದರೆ ಕೇರಳ ಸಂತ್ರಸ್ತರಿಗೆ ಯಾವ ರೀತಿ ನೆರವು ನೀಡಬಹುದು ಎಂಬುದನ್ನು ಇನ್ನು ಕೆಲವೇ ದಿನಗಳಲ್ಲಿ ತೀರ್ಮಾನಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಕೇರಳದ ಸಂತ್ರಸ್ತರಿಗೆ ನೆರವು ನೀಡುವುದರ ಸಂಬಂಧ ಯುಎಇ ರಾಷ್ಟ್ರಮಟ್ಟದ ಸಮಿತಿಯೊಂದನ್ನು ರಚಿಸಿತ್ತು ಎಂದಷ್ಟೇ ಯುಎಇ ರಾಯಭಾರಿ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT