ಕೇರಳಕ್ಕೆ ಮಾನವೀಯ ನೆರವು ನೀಡುತ್ತಾರಂತೆ ಪಾಕ್ ಪ್ರಧಾನಿ ಇಮ್ರಾನ್ ಖಾನ್!
ಇಸ್ಲಾಮಾಬಾದ್: ಪಾಕಿಸ್ತಾನದ ನೂತನ ಪ್ರಧಾನಿ ಇಮ್ರಾನ್ ಖಾನ್ ಕೇರಳ ಪ್ರವಾಹದ ಬಗ್ಗೆ ಮಾತನಾಡಿದ್ದು, ಪಾಕಿಸ್ತಾನ ಕೇರಳಕ್ಕೆ ಮಾನವೀಯ ನೆರವು ನೀಡಲು ಸಿದ್ಧವಿದೆ ಎಂದು ಹೇಳಿದ್ದಾರೆ.
ಪ್ರವಾಹದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದವರು ಶೀಘ್ರ ಚೇತರಿಸಿಕೊಳ್ಳಲು ಪ್ರಾರ್ಥನೆ ಸಲ್ಲಿಸಿರುವ ಇಮ್ರಾನ್ ಖಾನ್, ಅಗತ್ಯವಿದ್ದಲ್ಲಿ ಕೇರಳಕ್ಕೆ ಮಾನವೀಯ ನೆರವು ನೀಡುತ್ತೇವೆ ಎಂದು ಹೇಳಿದ್ದಾರೆ.
ಆಗಸ್ಟ್ 8 ರಿಂದ ಕೇರಳದಲ್ಲಿನ ಜಲ ಪ್ರವಾಹಕ್ಕೆ 230 ಜನರು ಮೃತಪಟ್ಟಿದ್ದು, ಕನಿಷ್ಠ 10 ಲಕ್ಷ ಜನರು ಕ್ಯಾಂಪ್ ಗಳಲ್ಲಿ ಜೀವಿಸುತ್ತಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಇಮ್ರಾನ್ ಖಾನ್, ಪಾಕಿಸ್ತಾನದ ಜನತೆ ಪರವಾಗಿ ಕೇರಳ ಜನತೆ ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics