ಲಂಡನ್: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿದೇಶಗಳಲ್ಲಿ ನೀಡುತ್ತಿರುವ ಹೇಳಿಕೆ ತೀವ್ರ ಚರ್ಚೆಗೆ ಗುರಿಯಾಗಿತ್ತಿದೆ. ಯುವ ಜನತೆ ಭಯೋತ್ಪಾದನೆಗೆ ಸೇರುವುದಕ್ಕೆ ನಿರುದ್ಯೋಗವೇ ಕಾರಣ ಎಂದು ಹೇಳಿದ್ದ ಬೆನ್ನಲ್ಲೇ ರಾಹುಲ್ ಗಾಂಧಿ ಆರ್ ಎಸ್ಎಸ್ ನ್ನು ತೀವ್ರಗಾಮಿ ಇಸ್ಲಾಮಿಕ್ ಸಂಘಟನೆಗಳಿಗೆ ಹೋಲಿಕೆ ಮಾಡಿ ವಿವಾದಕ್ಕೀಡಾಗಿದ್ದಾರೆ.
ಯುನೈಟೆಡ್ ಕಿಂಗ್ಡಮ್ ಗೆ ತೆರಳಿರುವ ರಾಹುಲ್ ಗಾಂಧಿ, ಆರ್ ಎಸ್ ಎಸ್ ಬಗ್ಗೆಯೂ ಮಾತನಾಡಿದ್ದು, ಭಾರತದ ಪ್ರಕೃತಿಯನ್ನು ಬದಲಾವಣೆ ಮಾಡಿ, ಭಾರತೀಯ ಸಂಸ್ಥೆಗಳನ್ನು ವಶಪಡಿಸಿಕೊಳ್ಳಲು ಯತ್ನಿಸುತ್ತಿದ್ದು, ತೀವ್ರಗಾಮಿ ಇಸ್ಲಾಮಿಕ್ ಸಂಘಟನೆಗಳಿಗೆ ಹೋಲಿಕೆಯಾಗುತ್ತದೆ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ನೀವು ಭಾರತೀಯ ಚಿಂತನೆಗಳ ಸುಪಾರಿ ಕಿಲ್ಲರ್ ಥರ ವರ್ತಿಸಬೇಡಿ ಎಂದು ಕಿಡಿ ಕಾರಿದ್ದು, ಕ್ಷಮೆ ಕೋರುವಂತೆ ಆಗ್ರಹಿಸಿದ್ದಾರೆ. ರಾಹುಲ್ ಗಾಂಧಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ, ರಾಷ್ಟ್ರಪತಿ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸೇರಿದಂತೆ ಅನೇಕ ಗಣ್ಯರು ಆರ್ ಎಸ್ ಎಸ್ ಹಿನ್ನೆಲೆ ಹೊಂದಿದ್ದಾರೆ. ಇಂತಹ ಸಂಘಟನೆಯನ್ನು ಇಸ್ಲಾಮಿಕ್ ತೀವ್ರಗಾಮಿ ಸಂಘಟನೆಗೆ ಹೋಲಿಕೆ ಮಾಡುವುದು ಅಕ್ಷಮ್ಯ ಎಂದು ಹೇಳಿದ್ದಾರೆ.
ಹೊರದೇಶದಲ್ಲಿ ಭಾರತದ ಬಗ್ಗೆ ಈ ರೀತಿ ಮಾತನಾಡುತ್ತಿರುವ ರಾಹುಲ್ ಗಾಂಧಿ ಭಾರತೀಯ ಚಿಂತನೆಗಳನ್ನು ಹತ್ಯೆ ಮಾಡಲು ಸುಪಾರಿ ಪಡೆದಿದ್ದಾರೆಯೇ ಎಂದು ಬಿಜೆಪಿ ಪ್ರಶ್ನಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics