ಸುಬ್ರಮಣ್ಯನ್ ಸ್ವಾಮಿ 
ದೇಶ

'ಮಾಲ್ಡೀವ್ಸ್ ಅನ್ನು ಭಾರತ ಆಕ್ರಮಿಸಿಕೊಳ್ಳಬೇಕು' ಸುಬ್ರಮಣ್ಯನ್ ಸ್ವಾಮಿ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಸರ್ಕಾರ!

ಮಾಲ್ಡೀವ್ಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಅಕ್ರಮಗಳು ನಡೆದರೆ ಭಾರತ ಆ ದೇಶವನ್ನು ಆಕ್ರಮಿಸಿಕೊಳ್ಳಬೇಕು ಎಂಬ ಬಿಜೆಪಿ ಸಂಸದ ಸುಬ್ರಮಣ್ಯನ್ ಸ್ವಾಮಿ ಅವರ ಹೇಳಿಕೆಯಿಂದ...

ನವದೆಹಲಿ: ಮಾಲ್ಡೀವ್ಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಅಕ್ರಮಗಳು ನಡೆದರೆ ಭಾರತ ಆ ದೇಶವನ್ನು ಆಕ್ರಮಿಸಿಕೊಳ್ಳಬೇಕು ಎಂಬ ಬಿಜೆಪಿ ಸಂಸದ ಸುಬ್ರಮಣ್ಯನ್ ಸ್ವಾಮಿ ಅವರ ಹೇಳಿಕೆಯಿಂದ ಸರ್ಕಾರ ಅಂತರವನ್ನು ಕಾಯ್ದುಕೊಂಡಿದೆ. 
ಸುಬ್ರಮಣ್ಯನ್ ಸ್ವಾಮಿ ಅವರು ಕಳೆದ ಎರಡು ದಿನಗಳ ಹಿಂದೆ ಕೊಲಂಬೋದಲ್ಲಿ ಮಾಲ್ಡೀವ್ಸ್ ನ ದೇಶಭ್ರಷ್ಟ ಅಧ್ಯಕ್ಷ ಮೊಹಮ್ಮದ್ ನಶೀದ್ ರನ್ನು ಭೇಟಿಯಾಗಿ ಬಂದ ಬಳಿಕ ಸ್ವಾಮಿ ಈ ರೀತಿ ಟ್ವೀಟ್ ಮಾಡಿದ್ದರು. 
ಸ್ವಾಮಿ ಟ್ವೀಟ್ ನಲ್ಲಿ ಅಧ್ಯಕ್ಷೀಯ ಚುನಾವಣಾ ಅಕ್ರಮಗಳು ನಡೆದರೆ ಮಾಲ್ಡೀವ್ಸ್ ಒಳಗೆ ಸೇನೆಯನ್ನು ನುಗ್ಗಿಸಿ ಭಾರತ ಆಕ್ರಮಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದರು. 
ಬಿಜೆಪಿ ಸಂಸದರ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್, ಡಾ. ಸುಬ್ರಮಣ್ಯನ್ ಸ್ವಾಮಿ ಅವರು ಟ್ವೀಟ್ ನಲ್ಲಿ ವ್ಯಕ್ತಪಡಿಸಿರುವುದು ಅವರ ವೈಯಕ್ತಿಕ ಅಭಿಪ್ರಾಯ ಅದು ಭಾರತ ಸರ್ಕಾರಕದ ದೃಷ್ಟಿಕೋನವನ್ನು ಬಿಂಬಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT