ರಾಫೆಲ್ ಜೆಟ್ ಒಪ್ಪಂದದಲ್ಲಿ ಹಗರಣ ನಡೆದಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್ ಪಕ್ಷ ಈಗ ಮಾಜಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರ ಹೇಳಿಕೆಗೆ ಪಟ್ಟು ಹಿಡಿದಿದೆ.
ರಾಫೆಲ್ ಜೆಟ್ ಒಪ್ಪಂದದಲ್ಲಿ ನಡೆದಿರುವ ನಿಯಮಗಳ ಉಲ್ಲಂಘನೆ ಬಗ್ಗೆ ಮನೋಹರ್ ಪರಿಕ್ಕರ್ ಅವರಿಗೆ ಸಂಪೂರ್ಣ ಮಾಹಿತಿ ಇದೆ. ಆದರೆ ಅವರು ಈ ಬಗ್ಗೆ ಮಾತನಾಡುತ್ತಿಲ್ಲ. ರಕ್ಷಣಾ ಸಚಿವರಾಗಿದ್ದವರಿಗೆ ರಾಫೆಲ್ ಜೆಟ್ ಒಪ್ಪಂದದ ಬಗ್ಗೆ ಗೊತ್ತಿಲ್ಲದೇ ಇರಲು ಹೇಗೆ ಸಾಧ್ಯ? ಭದ್ರತೆಗೆ ಸಂಬಂಧಿಸಿದ ಸಂಪುಟ ಸಮಿತಿಯ ನಿಯಮಗಳನ್ನು ಉಲ್ಲಂಘನೆ ಮಾಡಿದ್ದರ ಬಗ್ಗೆ ಮನೋಹರ್ ಪರಿಕ್ಕರ್ ಅವರಿಗೆ ಗೊತ್ತಿದ್ದರೂ ಅವರು ಮೌನ ಮುಂದುವರೆಸಿದ್ದಾರೆ, ಎಂದು ಕಾಂಗ್ರೆಸ್ ವಕ್ತಾರ ಚತುರ್ವೇದಿ ಆಕ್ಷೇಪಿಸಿದ್ದಾರೆ.
ಮನೋಹರ್ ಪರಿಕ್ಕರ್ ಅವರ ಮೌನ ದೇಶಕ್ಕೆ ದ್ರೋಹ ಬಗೆಯುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.