ಪೊಲೀಸ್ ದಾಳಿ 
ದೇಶ

'ರಾಜೀವ್ ಗಾಂಧಿ' ಮಾದರಿಯಲ್ಲಿ ಮೋದಿ ಹತ್ಯೆಗೆ ಸ್ಕೆಚ್: ಪೊಲೀಸರಿಗೆ ದೊರೆತ ಆ 2 ಪತ್ರದಲ್ಲೇನಿತ್ತು?

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆ ಮಾದರಿಯಂತೆ ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆ ಮಾದರಿಯಂತೆ ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಬಗ್ಗೆ ಪೊಲೀಸ್ ಉನ್ನತ ಮೂಲಗಳು ಮಾಹಿತಿ ನೀಡಿದ್ದು, ಅಧಿಕಾರಿಗಳಿಗೆ ಲಭಿಸಿರುವ ಪ್ರಮುಖ ಸಾಕ್ಷಿಗಳ ಅನ್ವಯ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಹತ್ಯೆ ಮಾಡಿದ ರೀತಿಯಲ್ಲೇ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಹತ್ಯೆಗೈಯ್ಯಲು ಸಂಚು ರೂಪಿಸಲಾಗಿತ್ತು ಎನ್ನಲಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ 2 ಪತ್ರ ಲಭಿಸಿದ್ದು, ಪತ್ರದಲ್ಲಿ ಹತ್ಯೆ ಕುರಿತ ಸಂಚನ್ನು ವಿವರಿಸಲಾಗಿದೆ ಎನ್ನಲಾಗಿದೆ.
ಮಾವೋವಾದಿಗಳ ನಡುವೆ ಈ ಪತ್ರ ಹರಿದಾಡಿದ್ದು, ಇದೀಗ ಪತ್ರದ ಸಾರಾಂಶ ಅಧಿಕಾರಿಗಳಿಗೆ ಲಭ್ಯವಾಗಿದೆ ಎಂದು ತಿಳಿದುಬಂದಿದೆ. ಈ ಪತ್ರದ ಆಧಾರದ ಮೇರೆಗೆ ದೇಶದ ವಿವಿಧ ರಾಜ್ಯಗಳಲ್ಲಿ ದಾಳಿ ನಡೆಸಿರುವ ಅಧಿಕಾರಿಗಳು ಹಲವರನ್ನು ಬಂಧಿಸಿದ್ದಾರೆ. 2016ರಲ್ಲೇ ಮೋದಿ ಹತ್ಯೆಗೆ ಸಂಚು ರೂಪಿಸಲಾಗಿತ್ತಾದರೂ, 2017ರಲ್ಲಿ ಹತ್ಯೆ ಸಂಚಿಗೆ ಪೂರ್ಣ ಪ್ರಮಾಣದ ಯೋಜನೆ ರೂಪಿಸಲಾಗಿತ್ತು. 
ಎರಡನೇ ಪತ್ರ ದೆಹಲಿ ಮೂಲಕ ಕಾರ್ಯಕರ್ತ ರೋನಾ ವಿಲ್ಸನ್ ಎಂಬುವವರ ನಿವಾಸದಲ್ಲಿ ದೊರೆತಿದ್ದು, ಈ ವೇಳೆ ಅಧಿಕಾರಿಗಳು ವಿಲ್ಸನ್ ಮತ್ತು ಇತರೆ ನಾಲ್ಕು ಮಂದಿಯನ್ನು ಬಂಧಿಸಿದ್ದರು. ಇದಕ್ಕೂ ಮೊದಲು ಮಹಾರಾಷ್ಟ್ರದ ಗಡ್ ಚಿರೋಲಿಯಲ್ಲಿ ಮೊದಲ ಪತ್ರ ದೊರೆತಿದ್ದು, ಇದರಲ್ಲಿ ಈ ಹಿಂದೆ ಕೂಂಬಿಂಗ್ ಆಪರೇಷನ್ ನಲ್ಲಿ ಸಾವನ್ನಪ್ಪಿದ್ದ39 ನಕ್ಸಲರ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುವ ಕುರಿತು ಬರಹಗಳಿದ್ದವು ಎನ್ನಲಾಗಿದೆ. ಅಂತೆಯೇ ಪತ್ರದಲ್ಲಿ ಪ್ರತೀಕಾರಕ್ಕೆ ಶಾಶ್ವತ ಯೋಜನೆ ರೂಪಿಸುವಂತೆ ತಿಳಿಸಲಾಗಿತ್ತು ಎಂದು ಹೇಳಗಾಗಿದೆ. 
ಇಂದು ಬೆಳಗ್ಗೆ 6 ಗಂಟೆಯಿಂದಲೇ ಪುಣೆ, ರಾಂಚಿ, ಗೋವಾ, ದೆಹಲಿ ಮತ್ತು ಹೈದರಾಬಾದ್ ನಗರಗಳಲ್ಲಿ ಏಕಕಾಲದಲ್ಲಿ ದಾಳಿ ನಡಸಿದ ಅಧಿಕಾರಿಗಳು ಹಲವರನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ, ಕಾರು ಆಪೋಷನ, ಕೂದಲೆಳೆ ಅಂತರದಲ್ಲಿ ಚಾಲಕ ಬಚಾವ್-Video

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!