ದೇಶ

2019 ರ ಲೋಕಸಭಾ ಚುನಾವಣೆ ಮೇಲೆ ಕಣ್ಣು : ಬಿಜೆಪಿ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಸಭೆ

Nagaraja AB

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರಮೋದಿ ಅವರಿಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿಂದು ಪಕ್ಷ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಗೃಹ ಸಚಿವ ರಾಜನಾಥ್ ಸಿಂಗ್, ವಿತ್ತ ಸಚಿವ ಅರುಣ್ ಜೇಟ್ಲಿ ಹಾಗೂ  ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ತಾನ ಸೇರಿದಂತೆ  ಬಿಜೆಪಿ ಆಡಳಿತವಿರುವ  15 ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಂಡಿದ್ದಾರೆ.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದ್ದು, ನಿರ್ದೇಶನ ನೀಡಲಾಗುತ್ತಿದೆ. ಮುಂಬರುವ ವಿಧಾನಸಭೆ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಕಾರಣದಿಂದಾಗಿ ಅನುಸರಿಸಬೇಕಾದ ಕಾರ್ಯತಂತ್ರ ಕುರಿತಂತೆ ಚರ್ಚಿಸಲಾಗುತ್ತಿದೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

ಮಧ್ಯಪ್ರದೇಶ, ರಾಜಸ್ತಾನ, ಚತ್ತೀಸ್ ಗಢ ರಾಜ್ಯಗಳಲ್ಲಿ ಈ ವರ್ಷದ ನಂತರ ವಿಧಾನಸಭಾ ಚುನಾವಣೆ ನಡೆಯಲಿದ್ದು, ಪ್ರಧಾನಿ ನರೇಂದ್ರಮೋದಿ  ಅಧಿಕಾರಕ್ಕೆ ಬಂದ ನಂತರ  ಬಡವರಿಗಾಗಿ ಜಾರಿಗೆ ತಂದಿರುವ ಯೋಜನೆಗಳು ಹಾಗೂ  ಉತ್ತಮ ಆಡಳಿತದ ಬಗ್ಗೆ ಜನರಿಗೆ ಯಾವ ರೀತಿ ಮನವರಿಕೆ ಮಾಡಿಕೊಡಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

SCROLL FOR NEXT