ಕರುಣಾ ನಿಧಿ ಮತ್ತು ಪತ್ನಿ ದಯಾಳು ಅಮ್ಮಾಳ್ 
ದೇಶ

ಮಾಜಿ ಸಿಎಂ ದಿವಂಗತ ಕರುಣಾನಿಧಿ ಪತ್ನಿ ದಯಾಳು ಅಮ್ಮಾಳ್‌ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಮಾಜಿ ಮುಖ್ಯಮಂತ್ರಿ ದಿವಂಗತ ಎಂ ಕರುಣಾನಿಧಿ ಅವರ ಪತ್ನಿ ದಯಾಳು ಅಮ್ಮಾಳ್‌ ಅವರನ್ನು ಹಠಾತ್‌ ಅನಾರೋಗ್ಯದ ಕಾರಣ ಅಪೋಲೋ ಆಸ್ಪತ್ರೆಗೆ ಸೇರಿಸಲಾಗಿದೆ.

ಚೆನ್ನೈ: ಮಾಜಿ ಮುಖ್ಯಮಂತ್ರಿ ದಿವಂಗತ ಎಂ ಕರುಣಾನಿಧಿ ಅವರ ಪತ್ನಿ ದಯಾಳು ಅಮ್ಮಾಳ್‌ ಅವರನ್ನು ಹಠಾತ್‌ ಅನಾರೋಗ್ಯದ ಕಾರಣ ಅಪೋಲೋ ಆಸ್ಪತ್ರೆಗೆ ಸೇರಿಸಲಾಗಿದೆ.
ದಯಾಳು ಅಮ್ಮಾಳ್‌ ಅವರನ್ನು ನಿನ್ನೆ ಮಂಗಳವಾರ ರಾತ್ರಿ ಆಸ್ಪತ್ರೆಗೆ ಸೇರಿಸಲಾಗಿದೆ. ಆದರೆ ಆಕೆಯ ಅನಾರೋಗ್ಯದ ಕಾರಣವಾಗಲೀ, ಆಕೆಯ ಆರೋಗ್ಯ ಸ್ಥಿತಿ ಬಗ್ಗೆ ಆಗಲೀ ಯಾವುದೇ ಮಾಹಿತಿ ಮಾಧ್ಯಮಕ್ಕೆ ಸಿಕ್ಕಿಲ್ಲ. 
ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್‌, ಎಂ ಕೆ ಅಳಗಿರಿ, ಎಂ ಕೆ ತಮಿಳರಸು ಮತ್ತು ಎಂ ಕೆ ಸೆಲ್ವಿ ಅವರ ತಾಯಿಯಾಗಿರುವ ದಯಾಳು ಅಮ್ಮಾಳ್‌ ಅವರು ದಿವಂಗತ ಕರುಣಾನಿಧಿ ಅವರ ಎರಡನೇ ಪತ್ನಿ. 
ನಿನ್ನೆ ಮಂಗಳವಾರ ರಾತ್ರಿ 9 ಗಂಟೆಯ ವೇಳೆಗೆ ಹಠಾತ್‌ ಅನಾರೋಗ್ಯಕ್ಕೆ ಗುರಿಯಾದ ಅಮ್ಮಾಳ್‌ ಅವರನ್ನು ಒಡನೆಯೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅನಾರೋಗ್ಯದ ಕಾರಣ ತಿಳಿದು ಬಂದಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ