ದೇಶ

ಜಮ್ಮು-ಕಾಶ್ಮೀರ: ಅನಂತ್ ನಾಗ್ ಜಿಲ್ಲೆಯಲ್ಲಿ ಎನ್'ಕೌಂಟರ್, 2 ಉಗ್ರರನ್ನು ಸದೆಬಡಿದ ಸೇನೆ

Manjula VN
ಅನಂತ್'ನಾಗ್: ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆಮಾಡಿದೆ ಎಂದು ಬುಧವಾರ ತಿಳಿದುಬಂದಿದೆ. 
ಅನಂತ್ ನಾಗ್ ಜಿಲ್ಲೆಯ ಮುನ್ವಾರ್ಡ್ ಎಂಬಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಇಂದು ಬೆಳಿಗ್ಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು. 
ಸೇನೆ ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಅಡಗಿ ಕುಳಿತಿದ್ದ ಉಗ್ರರು ಭದ್ರತಾ ಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಎನ್ ಕೌಂಟರ್ ನಡೆಸಲು ಮುಂದಾದ ಸೇನೆ ಇದೀಗ ಇಬ್ಬರು ಉಗ್ರರನ್ನು ಸದೆಬಡಿದಿದೆ ಎಂದು ವರದಿಗಳು ತಿಳಿಸಿವೆ. 
ಹತ್ಯೆಯಾದ ಇಬ್ಬರ ಉಗ್ರರನ್ನು ಅಲ್ತಾಫ್ ಅಹ್ಮದ್ ದಾರ್ ಮತ್ತು ಉಮರ್ ರಶೀದ್ ವಾನಿ ಎಂದು ಗುರ್ತಿಸಲಾಗಿದ್ದು, ಇಬ್ಬರೂ ಉಗ್ರರು ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆಂದು ತಿಳಿದುಬಂದಿದೆ. 
ಎನ್ ಕೌಂಟರ್ ನಡೆದ ಸ್ಧಳದಲ್ಲಿ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ಸೇನೆ ವಶಕ್ಕೆ ಪಡೆದುಕೊಂಡಿದ್ದು, ಕಾರ್ಯಾಚರಣೆ ಮುಂದುವರೆಸಿದೆ ಎನ್ನಲಾಗುತ್ತಿದೆ. ಈ ನಡುವೆ ಯಾವುದೇ ರೀತಿಯ ವದಂತಿಗಲು ಹರಡದಂತೆ ಎಚ್ಚರಿಕೆ ವಹಿಸಿರುವ ಅಧಿಕಾರಿಗಳು ಜಿಲ್ಲೆಯಾದ್ಯಂತ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ. 
SCROLL FOR NEXT