ಸಂಗ್ರಹ ಚಿತ್ರ 
ದೇಶ

ಸಂವಿಧಾನದಲ್ಲಿ ತಿದ್ದುಪಡಿ ತರದ ಹೊರತು ಒಂದು ದೇಶ ಒಂದು ಚುನಾವಣೆ ಸಾಧ್ಯವಿಲ್ಲ: ಚುನಾವಣಾ ಆಯೋಗ

ಬಹು ಉದ್ದೇಶಿತ ಒಂದು ದೇಶ ಒಂದು ಚುನಾವಣೆ ಪ್ರಸ್ತುತ ಅಸಾಧ್ಯ ಎಂದು ಕೇಂದ್ರ ಚುನಾವಣಾ ಆಯೋಗ ಅಭಿಪ್ರಾಯಪಟ್ಟಿದೆ.

ನವದೆಹಲಿ: ಬಹು ಉದ್ದೇಶಿತ ಒಂದು ದೇಶ ಒಂದು ಚುನಾವಣೆ ಪ್ರಸ್ತುತ ಅಸಾಧ್ಯ ಎಂದು ಕೇಂದ್ರ ಚುನಾವಣಾ ಆಯೋಗ ಅಭಿಪ್ರಾಯಪಟ್ಟಿದೆ.
ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿರುವ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಓಂ ಪ್ರಕಾಶ್ ರಾವತ್ ಅವರು, ಸದ್ಯದ ಮಟ್ಟಿಗೆ ಒಂದು ದೇಶ ಮತ್ತು ಒಂದು ಚುನಾವಣೆ ಜಾರಿ ಅಥವಾ ಅನುಷ್ಠಾನ ಕಷ್ಟಸಾಧ್ಯ. ಇದಕ್ಕಾಗಿ ಸಂವಿಧಾನದಲ್ಲಿ ತಿದ್ದುಪಡಿ ತರಬೇಕು. ಲೋಕಸಭೆ ಮತ್ತು ರಾಜ್ಯಸಭೆಗಳೆರಡರಲ್ಲೂ ಈ ತಿದ್ದುಪಡಿಗೆ ಅನುಮೋದನೆ ನೀಡಿ ಜಾರಿಗೊಳಿಸಿದರೆ ಮಾತ್ರ ಒಂದು ದೇಶ ಒಂದು ಚುನಾವಣೆ ಪರಿಕಲ್ಪನೆ ಸಾಧ್ಯವಾಗುತ್ತದೆ ಎಂದು ರಾವತ್ ಅಭಿಪ್ರಾಯಪಟ್ಟಿದ್ದಾರೆ.
ಇನ್ನು ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ಒಂದು ದೇಶ ಒಂದು ಚುನಾವಣೆ ಅಂದರೆ ಏಕಕಾಲದಲ್ಲೇ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ನಡೆಸುವ ಪರಿಕಲ್ಪನೆಗೆ ಈ ಹಿಂದೆ ಹಲವು ಸ್ಥಳೀಯ ಪಕ್ಷಗಳು ಬೆಂಬಲ ವ್ಯಕ್ತಪಡಿಸಿದ್ದವು. ಆದರೆ ದೇಶದ ಪ್ರಮುಖ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಈ ಬಗ್ಗೆ ನಿಲುವು ಸ್ಪಷ್ಟಪಡಿಸಿರಲಿಲ್ಲ. ಇತ್ತೀಚೆಗೆ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಭೇಟಿ ಬಳಿಕ ಒಂದು ದೇಶ ಒಂದು ಚುನಾವಣೆಗೆ ತಮ್ಮದೇನೂ ತಕರಾರಿಲ್ಲ ಎಂದು ಹೇಳುವ ಮೂಲಕ ಪರೋಕ್ಷ ಒಪ್ಪಿಗೆ ಸೂಚಿಸಿದ್ದರು.
ಆದರೆ ಕಾಂಗ್ರೆಸ್ ಮತ್ತು ಟಿಎಂಸಿ ಪಕ್ಷಗಳು ಮಾತ್ರ ಇದಕ್ಕೆ ತಮ್ಮ ವಿರೋಧ ಮುಂದುವರೆಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT